ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನ – ವ್ಯಾಪಕ ಬೆಂಬಲ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ನಿರ್ಲಕ್ಷ್ಯದ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ (SFI) “Enough is Enough” ಎಂಬ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದೆ. ಧರ್ಮೇಂದ್ರ 

ಶಿಕ್ಷಣ ಕ್ಷೇತ್ರದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆ ಮತ್ತು ನ್ಯಾಯಯುತ ಪರೀಕ್ಷಾ ವ್ಯವಸ್ಥೆಯನ್ನು ಖಚಿತಪಡಿಸುವಂತೆ ಒತ್ತಾಯಿಸಿ ಆರಂಭಿಸಲಾದ ಈ ಆನ್‌ಲೈನ್ ಮನವಿ ಅಭಿಯಾನಕ್ಕೆ ದೇಶದಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈಗಾಗಲೇ 50 ಸಾವಿರಕ್ಕೂ ಹೆಚ್ಚು ಜನರು ತಮ್ಮ ಬೆಂಬಲ ಸೂಚಿಸಿ ಮನವಿಗೆ ಸಹಿ ಹಾಕಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಇತ್ತೀಚಿನ ವರ್ಷಗಳಲ್ಲಿ ನೀಟ್, ಯುಜಿಸಿ-ನೆಟ್, ಸಿಯುಇಟಿ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪ್ರವೇಶ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಆಡಳಿತಾತ್ಮಕ ವೈಫಲ್ಯಗಳು ಪದೇಪದೇ ಬೆಳಕಿಗೆ ಬರುತ್ತಿವೆ. ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಪರೀಕ್ಷೆಗಳಿಗೆ ಸಿದ್ಧತೆ ನಡೆಸಿದರೂ, ಇಂತಹ ಅಕ್ರಮಗಳಿಂದ ಅವರ ಭವಿಷ್ಯ ಅನಿಶ್ಚಿತತೆಗೆ ಸಿಲುಕುತ್ತಿದೆ. ಇದರಿಂದ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆಯಾಗುತ್ತಿದೆ ಎಂದು ಅಭಿಯಾನದ ಭಾಗವಾಗಿ ತಿಳಿಸಲಾಗಿದೆ. ಧರ್ಮೇಂದ್ರ

ಇದನ್ನೂ ಓದಿ : ಖಾತಿ ಹಂಚಿಕೆ ಅಸಮಾಧಾನ: ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ

ಶಿಕ್ಷಣವು ಕೆಲವರ ಸವಲತ್ತು ಅಲ್ಲ, ಪ್ರತಿಯೊಬ್ಬರ ಹಕ್ಕು ಎಂಬುದನ್ನು ಒತ್ತಿ ಹೇಳಿರುವ ಎಸ್‌ಎಫ್‌ಐ, ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳಿಗೆ ಹೊಣೆಗಾರರನ್ನು ಉತ್ತರದಾಯಿತ್ವಕ್ಕೆ ಒಳಪಡಿಸಬೇಕು, ಪರೀಕ್ಷಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ತರಬೇಕು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬುದು ಈ ಅಭಿಯಾನದ ಇನ್ನೊಂದು ಬೇಡಿಕೆಯಾಗಿದೆ. “Enough is Enough” ಅಭಿಯಾನದ ಮೂಲಕ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ನಾಗರಿಕ ಸಮಾಜದ ವಿವಿಧ ವರ್ಗಗಳ ಜನರು ತಮ್ಮ ಧ್ವನಿಯನ್ನು ಎತ್ತುವಂತೆ ಎಸ್‌ಎಫ್‌ಐ ಕರೆ ನೀಡಿದೆ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ನ್ಯಾಯಯುತ, ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸಲು ಈ ಚಳುವಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.

ಆಸಕ್ತರು https://enoughisenough.sficec.in ಜಾಲತಾಣದ ಮೂಲಕ ಮನವಿಗೆ ಸಹಿ ಹಾಕಿ ಅಭಿಯಾನಕ್ಕೆ ಬೆಂಬಲ ಸೂಚಿಸಬಹುದಾಗಿದೆ. ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ್‌ ತಿಳಿಸಿದ್ದಾರೆ.

ಇದನ್ನೂ ನೋಡಿ : ಸರಕಾರಕ್ಕೆ ತೈಲದ ಆಟ, ಜನರಿಗೆ ಜೇಬಿನ ದರೋಡೆ! | ವಿಶ್ಲೇಷಣೆ – ಗುರುರಾಜ ದೇಸಾಯಿ Janashakthi Media

Donate Janashakthi Media

Leave a Reply

Your email address will not be published. Required fields are marked *