ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಇತಿಹಾಸದಲ್ಲೆ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಜೂನ್ 19ರಂದು ನಡೆಯಲಿದೆ. ಈ ಸಭೆಗೆ ಸಿದ್ಧತೆಗಾಗಿ ನಗರದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಜೂನ್ 16 ಸೋಮವಾರದಿಂದ ಮೂರು ದಿನಗಳ ಕಾಲ, ಅಂದರೆ ಜೂನ್ 20 ಶುಕ್ರವಾರ ಬೆಳಿಗ್ಗೆ 5 ಗಂಟೆಯವರೆಗೆ, ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಜೊತೆಗೆ, ನಂದಿಬೆಟ್ಟದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಲಾಗಿದೆ.
ಇದನ್ನೂ ಓದಿ: ಹವಾಮಾನ ಬದಲಾವಣೆಯ ಮೊದಲ ತಲದಂಡವೇ ರೈತ ಸಮುದಾಯ – ಡಾ. ರಾಜೇಗೌಡ
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ, ಈ ಸಭೆಯ ಸಂದರ್ಭದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.
ನಂದಿಬೆಟ್ಟದ ರಸ್ತೆಗಳು ಕಡಿದಾದ ತಿರುವುಗಳಿಂದ ಕೂಡಿದ್ದು, ವಾಹನಗಳು ಮತ್ತು ಪ್ರವಾಸಿಗರನ್ನು ಒಟ್ಟಿಗೆ ನಿಯಂತ್ರಿಸುವುದು ಕಷ್ಟಕರವಾಗಿದೆ. ಅಪಘಾತಗಳ ಸಾಧ್ಯತೆಯನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧವನ್ನು ವಿಧಿಸಲಾಗಿದೆ. ಸಭೆಗೆ ಅಗತ್ಯವಾದ ಸಿದ್ಧತೆಗಳನ್ನು ಸುಗಮವಾಗಿ ನಿರ್ವಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.
ಇದನ್ನೂ ನೋಡಿ: ಜಾತಿ ಗಣತಿ ವಿರೋಧಿಸಿದ ಮೋದಿಯವರ ಯು ಟರ್ನ್… ಸಮರ್ಥಿಸಿದ ಸಿದ್ದರಾಮಯ್ಯನವರು ಕವಲು ದಾರಿಯಲ್ಲಿ….
