ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಸೀಮಿತ 40 ಜನರ ತಂಡಗಳಾಗಿ ಕಾರ್ಯನಿರ್ವಹಿಸಬೇಕೆಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ರಾಜ್ಯದ ಗ್ರಾಮೀಣ ಪ್ರದೇಶಗಳ ಪರಿಸ್ಥಿತಿಗಳ ಕುರಿತು ಇಂದು ಬೆಳಗಾವಿ, ಕಲಬುರ್ಗಿ ವಿಭಾಗದ ಮಟ್ಟದ ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳ ಜತೆ ನಡೆದ ಆನ್‌ಲೈನ್ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಇದನ್ನು ಓದಿ: ಮೇ 26 ಕ್ಕೆ ಕರಾಳ ದಿನ : ದೆಹಲಿಯತ್ತ ಹೊರಟ ಸಾವಿರಾರು ರೈತರು
ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿರುವ ಪ್ರದೇಶಗಳನ್ನು ಕಂಟೋನ್ಮೆಂಟ್ ವಲಯಗಳಿಗೆ ಉದ್ಯೋಗ ಖಾತ್ರಿ ಕೆಲಸ ಅವಕಾಶವಿರುವುದಿಲ್ಲ. ಉಳಿದೆಡೆ ಕೆಲಸ ನಿರ್ವಹಿಸಲು ಅನುಮತಿಸಿದೆ.
ನರೇಗಾದಲ್ಲಿ ಕೆಲಸದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ವೈದ್ಯಕೀಯ ವೆಚ್ಚ ಮರುಪಾವತಿಸಲು ಅವಕಾಶ ನೀಡಲಾಗಿದೆ. ದಿನಕ್ಕೆ ₹ 10 ಸಾವಿರರಿಂದ ₹ 20 ಸಾವಿರದವರೆಗೂ ನೆರವು ದೊರೆಯಲಿದೆ. ಯೋಜನೆಯ ಶೇ.6ರ ಆಡಳಿತಾತ್ಮಕ ವೆಚ್ಚವನ್ನು ಭರಿಸಲು ಎಲ್ಲ ಜಿಲ್ಲಾ ಪಂಚಾಯಿತಿಗಳ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಇದಲ್ಲದೆ, ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಮತ್ತು ನೈರ್ಮಲ್ಯದ ತುರ್ತು ಕಾಮಗಾರಿಗಳಿಗೆ 15ನೇ ಹಣಕಾಸಿನ ಅನುದಾನ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಅನುಮತಿ ನೀಡಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಇದನ್ನು ಓದಿ: ಯಡಿಯೂರಪ್ಪ ಘೋಷಿಸಿದ್ದು ಕೇವಲ ರೂ. 483.44 ಕೋಟಿ ಪರಿಹಾರ
ಈ ಹಿಂದೆ ಸದರಿ ಅನುದಾನವನ್ನು ಬಳಸಿಕೊಳ್ಳಲು ಕ್ರಿಯಾ ಯೋಜನೆ ಸಿದ್ಧಪಡಿಸಿ, ಜಿಲ್ಲಾ ಪಂಚಾಯಿತಿ ಸಿಇಒ ಅನುಮೋದನೆ ಪಡೆಯಬೇಕಾಗಿತ್ತು. ಪ್ರಸ್ತುತ ಈ ನಿಯಮ ಸಡಿಲಿಸಲಾಗಿದೆ. ಅಲ್ಲದೇ, ತುರ್ತು ಕಾರ್ಯಗಳಿಗೆ ಸಿಬ್ಬಂದಿ ಕೊರತೆಯಾದರೆ ಸಿಇಒ ಅವರಿಂದ ಅನುಮತಿ ಪಡೆದು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.
ಕುಡಿಯುವ ನೀರಿನಲ್ಲಿನ ಫಂಗಸ್ ಹರಡಿರುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹಾಗಾಗಿ, ಪ್ರತಿ ಮನೆಗಳಲ್ಲೂ ನೀರನ್ನು ಕಾಯಿಸಿ, ಆರಿಸಿ ಕುಡಿಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹಿಂದಿರುವ ಜನರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ ಎಂದು ಹೇಳಿದರು.