ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ

ಕೊಪ್ಪಳ: ಜನರಲ್ಲಿರುವ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಬಾವಿ ಮಾತನಾಡಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ಹಲವು ವರ್ಷಗಳಿಂದ ಮೌಢ್ಯದ ಕುರಿತು ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಸುತ್ತ ಬಂದಿದೆ.

ಇದನ್ನು ಓದಿ : ಛತ್ತೀಸ್‌ಗಢ | ಹಸ್‌ದೇವ್‌ ಅರಣ್ಯದಲ್ಲಿ ಗಣಿಗಾರಿಕೆಗೆ ವಿರೋಧ; 30 ಕಾಂಗ್ರೆಸ್ ಶಾಸಕರ ಅಮಾನತು

ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮೌಡ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ. ಇದಕ್ಕೆ ಪೂರಕವಾಗಿ ಸರಕಾರದ ವತಿಯಿಂದ “ವೈಜ್ಞಾನಿಕ ಅಕಾಡೆಮಿ”ಯನ್ನು ಸ್ಥಾಪಿಸುವ ಮೂಲಕ ಪರಿಷತ್ತಿನ ಕಾರ್ಯಕ್ಕೆ ಶಕ್ತಿ ತುಂಬಬೇಕು. ಈ ಕುರಿತು ಸರ್ಕಾರ ಆಸಕ್ತಿವಹಿಸಿ ಆದಷ್ಟು ಶೀಘ್ರ ಅಕಾಡೆಮಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರು ಮನವಿಯನ್ನು ಸರಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪರಿಷತ್ತಿನ ಸದಸ್ಯರಾದ ಕುಬೇರ ಮಜ್ಜಿಗಿ, ಅಮರೇಶ ಪಾಟೀಲ್, ನಿಂಗಜ್ಜ ಶಹಪುರ್, ಆನಂದ ಕಿನ್ನಾಳ, ಹನುಮಂತಪ್ಪ ಕುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನು ನೋಡಿ : ತೆರಿಗೆ ಹಂಚಿಕೆ ತಾರತಮ್ಯ : ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸರ್ಕಾರದ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *