ಕೊಪ್ಪಳ: ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪಿಸಲು ಮುಂದಾಗಿರುವ ಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಖಾನೆ ಸ್ಥಾಪನೆ ಪ್ರಸ್ತಾವ ಕೇಂದ್ರದ ಮುಂದೆ ಬಂದಿಲ್ಲ ಎಂದರು. ಕೊಪ್ಪಳ
ಕಾರ್ಖಾನೆ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರ ಹಾಗೂ ಕಾರ್ಖಾನೆಗಳ ನಡುವೆ ನಡೆದ ಒಪ್ಪಂದವಾಗಿದೆ. ಇದರಲ್ಲಿ ಕೇಂದ್ರದ ಹಸ್ತಕ್ಷೇಪ ಇಲ್ಲ ಎಂದರು. ಕೊಪ್ಪಳ
ಬಲ್ಡೋಟಾ ಕಂಪನಿ ಕಾರ್ಖಾನೆ ನಿರ್ಮಾಣ ವಿರೋಧಿಸಿ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟ ಗಮನಿಸಿದ್ದೇನೆ. ಇದಕ್ಕೆ ನನ್ನ ಬೆಂಬಲವಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ, ಸಾರ್ವಜನಿಕರ ಜತೆ ಚರ್ಚೆ ಮಾಡಬೇಕು. ಪರಿಸರಕ್ಕೆ ಹಾನಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: ರಾಜ್ಯ ಸರಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಒತ್ತಾಯ: ಎಸ್.ಎಫ್.ಐ
ಉಕ್ಕು ತಯಾರಿಸುವ ದೇಶದ ಹಲವಾರು ದೊಡ್ಡ ಕಾರ್ಖಾನೆಗಳಿಗೆ ಭೇಟಿ ನೀಡಿದ್ದೇನೆ. ಅಲ್ಲಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. 30 ರಿಂದ 35 ಸಾವಿರ ಎಕರೆ ಪ್ರದೇಶದಲ್ಲಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ. ಅಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಿದ್ದಾರೆ.
ಅದೇ ರೀತಿಯಲ್ಲಿ ಆಯಾ ರಾಜ್ಯ ಸರ್ಕಾರಗಳು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಯಾವುದೇ ಸರ್ಕಾರವಿರಲಿ ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಖಾನೆ ಆರಂಭಿಸಬೇಕು ಎಂದರು.
ಕೈಗಾರಿಕೆಗಳ ಸ್ಥಾಪನೆಗೆ ಕೇಂದ್ರದ ನೀತಿಯಿದ್ದು, ಅದು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡುವುದು ಹಾಗೂ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುವುದು ಬಿಟ್ಟು ಬೇರೆ ಏನು ಮಾಡುತ್ತಿಲ್ಲ ಎಂದರು.
ಕಲ್ಯಾಣ ಕರ್ನಾಟಕಕ್ಕೆ ಕಳೆದ ವರ್ಷದ ಬಜೆಟ್‌ನಲ್ಲಿ ₹5 ಸಾವಿರ ಕೋಟಿ ಘೋಷಿಸಿದರೂ ನಯಾಪೈಸೆ ಬಿಡುಗಡೆ ಮಾಡಿಲ್ಲ. ಈ ಬಾರಿಯೂ ಘೋಷಣೆಗೆ ಮಾತ್ರ ಸೀಮಿತವಾಗಲಿದೆ ಎಂದರು.
ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದೆ. ಹಣ ದುರ್ಬಳಕೆ ಹಾಗೂ ಸೋರಿಕೆಯಾಗುತ್ತಿರುವುದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಕುಂಠಿತವಾಗಿವೆ. ಗ್ಯಾರಂಟಿ ಯೋಜನೆಗಳ ನೆಪ ಮುಂದಿಟ್ಟು ಹಣ ಸೋರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಇದನ್ನೂ ನೋಡಿ: ಗ್ರೇಟರ್ ಬೆಂಗಳೂರಿನಿಂದ ಯಾರಿಗೆ ಲಾಭ? ಜನ ಸಾಮನ್ಯರಿಗೆ ಅನುಕೂಲವೇ? Janashakthi Media