ಹೆಚ್ಚುವರಿ 188 ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ| ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.ಕ್ಯಾಂಟೀನ್‌ಗಳ

ನವೆಂಬರ್-30 ಶಾಸಕರ ಭವನದ ಆವರಣದಲ್ಲಿ ಸಂತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ವೇಳೆ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲವೆಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಇದಲ್ಲದೇ ಅಗತ್ಯ ಇರುವ ಕಡೆ ಕ್ಯಾಂಟೀನ್ ಆರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಜಾಗದ ಕೊರತೆ ಇರುವ ಕಡೆ ಸಂಚಾರಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದರು.

ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರು ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಜಾತ್ಯತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಹೊಳೆನರಸೀಪುರ| ಚಿಟ್ಟನಹಳ್ಳಿ ಗ್ರಾಮದ ವಾಟರ್‌ಮನ್ ಭೈರಯ್ಯ ಬದುಕು ದುಸ್ತರ

ಬಳಿಕ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳನ್ನು ನಾಡಿಗೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂತಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ ಎಂದರು.

ವಿಡಿಯೋ ನೋಡಿ: ಬೆಂಗಳೂರು ಕೃಷಿ ಮೇಳ 2023 ಹೇಗಿತ್ತು? ಎಷ್ಟು ಜನ ಭಾಗವಹಿಸಿದ್ದರು, ಗಳಿಸಿದ ಆದಾಯ ಎಷ್ಟು? ಒಂದು ರೌಂಡಪ್‌

Donate Janashakthi Media

Leave a Reply

Your email address will not be published. Required fields are marked *