ಎತ್ತಿನಹೊಳೆ ಯೋಜನೆ ಮೂಲಕ 29 ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು: ಮುಖ್ಯಮಂತ್ರಿ

ಬೆಂಗಳೂರು: ಎತ್ತಿನಹೊಳೆ ಯೋಜನೆ ಮೂಲಕ ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ಕಣಿವೆಗೆ ನೀರು ಹರಿಸಬೇಕು. ಈ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸು ಮುಖ್ಯಮಂತ್ರಿಗಳು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿ: ಕಾಸರಗೋಡಿನಲ್ಲಿನ ಗ್ರಾಮಗಳ ಕನ್ನಡ ಹೆಸರು ಬದಲಾವಣೆ ಇಲ್ಲ ; ಕೇರಳ ಸರಕಾರ ಸ್ಪಷ್ಟನೆ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಎಲ್ಲ ಹಂತ ಪ್ರಕ್ರಿಯೆಗಳನ್ನು ಸರಕಾರ ಪೂರ್ಣಗೊಳಿಸಿದೆ. ಕೇಂದ್ರ ಸಚಿವ ಸಂಪುಟದ ಅನುಮೋದನೆ ಮಾತ್ರ ಬಾಕಿಯಿದೆ. ಈಗಾಗಲೇ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ‌ ಚರ್ಚಿಸಲಾಗಿದ್ದು, ಶೀಘ್ರವೇ ‌ಅನುಮೋದನೆ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಾವರು ಭರವಸೆ ನೀಡಿದರು.

ಎತ್ತಿನಹೊಳೆ ಯೋಜನೆಗೆ ₹9,003.86 ಕೋಟಿ  ವೆಚ್ಚವಾಗಿದೆ. ಕಳೆದ ಎರಡು ವರ್ಷಗಳಲ್ಲಿ ₹2,362.62 ಕೋಟಿಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. ಯೋಜನೆಯಲ್ಲಿ ಅಕ್ರಮ ಏನಾದರೂ ನಡೆದರೆ ಅಧಿಕಾರಿಗಳನ್ನು ಹೊಣೆ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದೇನೆ. ಎತ್ತಿನಹೊಳೆ ಯೋಜನೆ ಶೀಘ್ರ ಪೂರ್ಣಗೊಳಿಸುತ್ತೇವೆ. ಸಾಲ ತಂದಾದರೂ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸುತ್ತೇವೆ .ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದರು.

ಯೋಜನೆಯನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *