ಬೆಂಗಳೂರು: ಎತ್ತಿನಹೊಳೆ ಯೋಜನೆಯಿಂದ ಶಿರಾ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಹಂಚಿಕೆಯಾಗಿರುವ ಯೋಜನೆಯನ್ನು ಮಾರ್ಪಡಿಸಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾಗಿ ರೂಪಿಸಲು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಸಮನ್ವಯ ಸಮತಿಗೆ ಮನವಿ ಮಾಡಲು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಎತ್ತಿನಹೊಳೆ ಯೋಜನೆ ಮೂಲಕ ಶಿರಾ ತಾಲೂಕಿನ 200 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಬಂಧ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಬಿ ಜಯಚಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಎತ್ತಿನಹೊಳೆ ಯೋಜನೆ ಮೂಲಕ ಶಿರಾ ನಗರದ 200 ಕೆರೆಗಳಿಗೆ ಕುಡಿಯುವ ನೀರಿಗಾಗಿ 0.514 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ . ಇದರಿಂದ ಹೆಚ್ಚು ಪ್ರಯೋಜನವಾಗುವುದಿಲ್ಲ ಹಾಗಾಗಿ
ಇದನ್ನು ಓದಿ : ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ
ಈ ಯೋಜನೆಯನ್ನು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾಗಿ ಮಾರ್ಪಡಿಸಬೇಕು ಎಂದು ಟಿ.ಬಿ ಜಯಚಂದ್ರ ಅವರು ಅಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಒಪ್ಪಿದ ಅಧಿಕಾರಿಗಳು ಈ ವಿಷಯವನ್ನು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಂಡಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು .
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಮಂಡಳಿ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜೊತೆ ಸಹ ಮುಂದಿನ ತಿಂಗಳಲ್ಲಿ ಒಂದು ಸಭೆ ಮಾಡುವುದಾಗಿ, ತಿಳಿಸಿದರು .
ಈ ಯೋಜನೆಯ ಕಾರ್ಯ ಪ್ರಗತಿಯನ್ನು ಹಾಗೂ ಭೂಸ್ವಾಧೀನ ಮತ್ತು ಈ ಯೋಜನೆ ಹಣ ಬಿಡುಗಡೆಗೊಳಿಸಿರುವ ಮಾಹಿತಿಯನ್ನು ಟಿ .ಬಿ ಜಯಚಂದ್ರ ಅವರು ಇದೇ ವೇಳೆ ಪಡೆದರು. ಯೋಜನೆ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ಬರಪೀಡಿತ ಜಿಲ್ಲೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ ಜಯಚಂದ್ರ,ಭದ್ರಾ ಮೇಲ್ದಂಡೆ ಯೋಜನೆಯ ಪ್ರಗತಿಯ ವಿವರಗಳನ್ನು ಸಹ ಪಡೆದರು.
ಜಲಸಂಪನ್ಮೂಲ ಸಚಿವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರಕೆ .ಜಯಪ್ರಕಾಶ್ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಮುಖ್ಯ ಇಂಜಿನಿಯರ್ ವರದಯ್ಯ, ಎಕ್ಸಿಕ್ಯೂಟಿವ್ ಇಂಜಿನಿಯರ್ ಆನಂದ್ ಕುಮಾರ್ ಹಾಗೂ ಸಹಾಯಕ ಅಭಿಯಂತರ ಯೋಗೇಶ್ ಹಾಗೂ ಟಿ.ಬಿ ಜಯಚಂದ್ರ ಅವರ ನೀರಾವರಿ ಸಲಹೆಗಾರರ ಈಶ್ವರಯ್ಯ ಅವರು ಸಭೆಯಲ್ಲಿ ಹಾಜರಿದ್ದರು.
ಇದನ್ನು ನೋಡಿ : ಪ್ರಜ್ವಲ್ ಲೈಂಗಿಕ ಹತ್ಯಾಕಾಂಡ : ವಿಶೇಷ ನ್ಯಾಯಾಲಯ ಸ್ಥಾಪನೆ ಅಗತ್ಯ – ಹೈಕೋರ್ಟ್ ವಕೀಲ Janashakthi Media