ಕರ್ನಾಟಕ ಉಪಚುನಾವಣೆ: ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು , ಕುಟುಂಬ ರಾಜಕಾರಣವನ್ನು ತಿರಸ್ಕರಿಸಿದ ಮತದಾರರು

ಗುರುರಾಜ ದೇಸಾಯಿ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಬ್ಬರು ಹೀನಾಯ ಸೋಲು ಅನುಭವಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳು ‘ರಾಜಕೀಯ ರಂಗಪ್ರವೇಶಕ್ಕೆ’ ಅಣಿಯಾಗಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ರಂಗ ಪ್ರವೇಶಕ್ಕೆ ಮತದಾರರು ಮಣೆ ಹಾಕಿಲ್ಲ, ಆ ಮೂಲಕ ಕುಟುಂಬ ರಾಜಕಾರಣ ನಡೆಯುವುದಿಲ್ಲ ಎಂದು ಮತದಾರರು ಸಂದೇಶ ರವಾನಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ ಯೋಗೇಶ್ವರ್‌ 30 ಸಾವಿರ ಮತಗಳಿಂದ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ.    ಶಿಗ್ಗಾಂವಿಯಲ್ಲಿ ಪಠಾಣ್‌ ಯಾಸೀರ್‌ಅಹಮದ್‌ಖಾನ್‌ 15 ಸಾವಿರ ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಸೋಲಿಸಿದ್ದಾರೆ.

ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ತುಕಾರಾಂ 9 ಸಾವಿರ ಮತಗಳಿಂದ ಬಿಜೆಪಿಯ ಬಂಗಾರು ಹನುಮಂತು ಅವರನ್ನು ಸೋಲಿಸಿದ್ದಾರೆ. ಅನ್ನಪೂರ್ಣ ಅವರು 93,616 ಮತಗಳನ್ನು ಪಡೆದರು, ಬಂಗಾರು ಹನುಮಂತು 83,967 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿಮಹಾರಾಷ್ಟ್ರ ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಫಲಿತಾಂಶ: ಆರಂಭಿಕ ಮುನ್ನಡೆಯಲ್ಲಿ ಸಮಬಲ ಪೈಪೋಟಿ

ಹೆಚ್.ಡಿ.ದೇವೇಗೌಡ, ಎಸ್.ಆರ್.ಬೊಮ್ಮಾಯಿ ಸಹ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ರಾಜ್ಯ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಕುಟುಂಬ ಸದಸ್ಯರು ಶಾಸಕ, ಸಂಸದರಾದರೂ ಮುಖ್ಯಮಂತ್ರಿ ಆಗುವ ಅವಕಾಶಗಳು ಲಭಿಸಿದ್ದು ಹೆಚ್. ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಮಾತ್ರ. ಇದೀಗ ಮೂರನೇ ತಲೆಮಾರಿನ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿ ಸ್ಪರ್ಧಿಸುವ ಮೂಲಕ ಚುನಾವಣಾ ಕಣ ರಂಗೇರಿತ್ತು. ” ನಿಮ್ಮ ಕುಟುಂಬವೇ ರಾಜಕೀಯ ಮಾಡುವುದಾದರೆ ನಾವು ಏನು ಮಾಡಬೇಕು” ನಮ್ಮ ಶ್ರಮ ಏನಾಗಬೇಕು ಎಂದು ಬಿಜೆಪಿಯ ಕಾರ್ಯಕರ್ತರು ಒಳಹೊಡೆತ ನೀಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *