ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏ.17ರ ವರೆಗೆ ಸಿಬಿಐ ಕೋರ್ಟ್ ಸೋಮವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರ ಎದುರು ಸಿಸೋಡಿಯಾ ಅವರನ್ನು ಹಾಜರುಪಡಿಸಲಾಗಿತ್ತು.
ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಹಗರಣ : ಏ.3ರವರೆಗೆ ನ್ಯಾಯಾಂಗ ಬಂಧನದಲ್ಲಿ ಸಿಸೋಡಿಯಾ
ಈ ವೇಳೆ ಹಗರಣದ ತನಿಖೆಯು ನಿರ್ಣಾಯಕ ಹಂತದಲ್ಲಿದೆ ಎಂದು ಸಿಬಿಐ ತಿಳಿಸಿತು. ನಂತರ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಿದರು.ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.