ಅಬಕಾರಿ ನೀತಿ ಪ್ರಕರಣ : ಮನೀಶ್‌ ಸಿಸೋಡಿಯಾಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Please follow and like us:

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏ.17ರ ವರೆಗೆ ಸಿಬಿಐ ಕೋರ್ಟ್‌ ಸೋಮವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್‌ ಅವರ ಎದುರು ಸಿಸೋಡಿಯಾ ಅವರನ್ನು ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಹಗರಣ : ಏ.3ರವರೆಗೆ ನ್ಯಾಯಾಂಗ ಬಂಧನದಲ್ಲಿ ಸಿಸೋಡಿಯಾ

ಈ ವೇಳೆ ಹಗರಣದ ತನಿಖೆಯು ನಿರ್ಣಾಯಕ ಹಂತದಲ್ಲಿದೆ ಎಂದು ಸಿಬಿಐ ತಿಳಿಸಿತು. ನಂತರ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಿದರು.ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮನೀಶ್‌ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *