ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ

ಮಹಾರಾಷ್ಟ್ರ: ರಾಜ್ಯದ ನಾಗ್ಪುರ ಬಳಿಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ.

ಗುರುವಾರ ಮಧ್ಯಾಹ್ನ ನಾಗ್ಪುರ ನಗರದ ಬಳಿಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಅನಾಹುತಗೊಂಡಿರುವ ಬಗ್ಗೆ ಸುದ್ದಿಸಂಸ್ಥೆಯೊಂದಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಲೋಕಸಭೆ ಚುನಾವಣೆ: 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಇವಿಎಂ ಮೂಲಕ ಚಲಾವಣೆಯಾದ ಮತಗಳಿಗಿಂತ ಅಧಿಕ ಮತಗಳ ಎಣಿಕೆ

ನಾಗ್ಪುರ ನಗರದಿಂದ ಸುಮಾರು 25 ಕಿಮೀ ದೂರದಲ್ಲಿರುವ ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಧಮ್ನಾ ಗ್ರಾಮದಲ್ಲಿರುವ ಚಾಮುಂಡಿ ಎಕ್ಸ್‌ಪ್ಲೋಸಿವ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶಮುಖ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಕಾರ್ಮಿಕರು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ನೋಡಿ : ‘ಮೋದಿಸರ್ಕಾರ’ ಬೇಡ, ಎನ್‌ಡಿಎ ಸರ್ಕಾರ ಬೇಕಾದರೆ ಇರಲಿ- ಭಾರತದ ಮತದಾರರ ತೀರ್ಪು Janashakthi Media

Donate Janashakthi Media

Leave a Reply

Your email address will not be published. Required fields are marked *