ಮೈಸೂರು: ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಿದ್ಧತೆ ನಡೆಯುತ್ತರುವ ಹೊತ್ತಿನಲ್ಲಿ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಅಪರಿಚಿತರು ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.
ಇದನ್ನು ಓದಿ : ವಾಲ್ಮೀಕಿ ನಿಗಮ ಹಗರಣ : ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್ ಆತ್ಮಹತ್ಯೆ
ಮಾನವ-ಪ್ರಾಣಿ ಸಂಘರ್ಷ: ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಸಂದೇಹಪಡಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಫೋಟಕಗಳು
ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಸ್ಫೋಟಕಗಳು
ಇದನ್ನು ನೋಡಿ : “ಸಂಜೆ ಹೆಣ್ಣುಮಕ್ಕಳು ನೆಮ್ಮದಿಯಾಗಿ ಓಡಾಡಬೇಕಾದರೆ ಗಂಡಸು ಮನೆಯೊಳಗಿರಬೇಕು” ವಿಕಿಪೀಡಿಯಾ ಜಾಗೃತಿ