ಗುಬ್ಬಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ.
ಏ.13 ರಂದು ಬಿಜೆಪಿ ತುಮಕೂರು ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ವಿ. ಸೋಮಣ್ಣ ಪರ ಪ್ರಚಾರ ಮಾಡುವಾಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ. ಸುರೇಶ್ ಅವರು ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಡಿ.ಕೆ. ಸುರೇಶ್ ದೇಶ ಮತ್ತು ರಾಜ್ಯವನ್ನು ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ” ಎಂದು ಟೀಕಿಸಿದ್ದರು. ಕುಮಾರಸ್ವಾಮಿ
ಇದನ್ನು ಓದಿ : ‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥ ಕಾರ್ಯಕ್ರಮ
ಚುನಾವಣಾ ಪ್ರಚಾರದ ವೇಳೆ ಎಸ್.ಎಫ್.ಟಿ. ಚುನಾವಣಾ ಕರ್ತವ್ಯದಲ್ಲಿದ್ದ ಮಹೇಶ್, ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಬೆಂಗಳೂರಿನ 42ನೇ ಹೆಚ್ಚುವರಿ ಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
ಇದನ್ನು ನೋಡಿ : ಗ್ಲೆನ್‌ಮಾರ್ಕ್ ನಿಂದ ಚುನಾವಣಾ ಬಾಂಡ್ ಖರೀದಿ : ಕೇಂದ್ರ ಸರ್ಕಾರದ ಕೊಲೆಗಡುಕತನ ಬಯಲು – ಬಾನು ಮುಷ್ತಾಕ್