ರಾಣೇಬೆನ್ನೂರ: ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸುವ ಇಲಾಖೆಯ ನಿಯಮ ಉಲ್ಲಂಘನೆ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಹಾಗೂ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಹಾಗೂ ಇಲಾಖೆಯ ನಿಯಮ ಮರೆತ ಅಧಿಕಾರಿಗಳನ್ನು ಎಚ್ಚರಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ರಂದು ಪರಿವೀಕ್ಷಣಾ ಮಂದಿರ (ಐಬಿ) ಯಿಂದ ಬಸ್ ನಿಲ್ದಾಣದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಶಾಸಕರ ಅಪ್ತ ಸಹಾಯಕ ಮಹೇಶ್ ಕೆಂಚರೆಡ್ಡಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಮಾಲತೇಶ ಬಾರ್ಕಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಹಾಸ್ಟೆಲ್
ಈ ಸಂಧರ್ಭದಲ್ಲಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಭೋವಿ ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ರಾಜ್ಯಾದ್ಯಂತ ನಡೆಸಿದ ಹೋರಾಟದ ಪರಿಣಾಮವಾಗಿ ಸಮಾಜ ಕಲ್ಯಾಣ ಇಲಾಖೆಗೆ ಅರ್ಜಿ ಹಾಕಿದ ಎಲ್ಲರಿಗೂ ವಸತಿ ಸೌಲಭ್ಯ ನೀಡಬೇಕು ಹೆಚ್ಚುವರಿ ಅರ್ಜಿ ಬಂದಲಿ ಬಾಡಿಗೆ ಬಿಲ್ಡಿಂಗ್ ನಲ್ಲಿ ನಡೆಸಬೇಕೆಂದು ರಾಜ್ಯ ಸರ್ಕಾರವು ಅದೇಶ ಹೊರಡಿಸಿತು. ಈ ಆದೇಶದಂತೆ ಎಲ್ಲಾ ಕಡೆಗಳಲ್ಲಿ ಸೌಲಭ್ಯ ನೀಡುತ್ತಿದ್ದಾರೆ ಆದರೆ ತಾಲ್ಲೂಕಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿಯಮ ಉಲ್ಲಂಘನೆವಾಗಿದೆ. ನೂರಾರು ವಿದ್ಯಾರ್ಥಿಗಳು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೂಡಲೇ ಶಾಸಕರು ಮಧ್ಯ ಪ್ರವೇಶ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ತೆಗೆದುಕೊಂಡು ಸ್ಥಳೀಯ, ಹೊರ ಜಿಲ್ಲೆ,ತಾಲ್ಲೂಕು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೂ ಸೌಲಭ್ಯ ನೀಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನಗರಕ್ಕೆ ಹೆಚ್ಚುವರಿಯಾಗಿ ಬಾಲಕರ, ಬಾಲಕಿಯರ ತಲಾ ಒಂದೊಂದು ಹಾಸ್ಟೆಲ್ ಮಂಜೂರು ಮಾಡಿಸಬೇಕು ಇಲ್ಲವೇ ಬಾಡಿಗೆ ಬಿಲ್ಡಿಂಗ್ ನಲ್ಲಿ ನಡೆಸಬೇಕು ಎಂದು ಅಗ್ರಹಿಸಿದರು.
ಇದನ್ನೂ ಓದಿ : ಡಾ.ವಿಷ್ಣುವರ್ಧನ್ ಸಮಾಧಿ ಮರು ನಿರ್ಮಾಣಕ್ಕೆ ಅಗ್ರಹ ಹಾಸ್ಟೆಲ್
ಎಸ್ಎಫ್ಐ ಸಹ ಕಾರ್ಯದರ್ಶಿ ಕೃಷ್ಣ ನಾಯ್ಕ ಮಾತನಾಡಿ, ಶಾಲಾ- ಕಾಲೇಜು ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರು ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಂಡಿಲ್ಲದಿರುವುದು ದುರಂತವೇ ಸರಿ. ಸಮಾಜ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಿಕೊಡಬೇಕು ಎಂಬ ಆದೇಶವಿದೆ ಆದರೆ ರಾಣೇಬೆನ್ನೂರ ತಾಲ್ಲೂಕಾಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಕಾಲೇಜ್ ಪ್ರಾರಂಭವಾಗಿ ಮೂರು ತಿಂಗಳು ಕಳೆದರು ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಸೌಲಭ್ಯ. ಬೇರೆ ಜಿಲ್ಲೆ, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವಿಳಂಬ ಮತ್ತು ನಿರಾಕರಣೆ ನೀತಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಮುಖಂಡರಾದ ಅರುಣ್ ನಾಗವತ್ ಮಾತನಾಡಿ, ಈಗಾಗಲೇ ಮೂರು ನಾಲ್ಕು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯೇ ನೇರವಾಗಿ ಯಾವುದೇ ಆಯ್ಕೆ ಸಮಿತಿ ರಚಿಸದೆ, ಆಯ್ಕೆ ಬಿಡುಗಡೆ ಪಟ್ಟಿ ಇಲ್ಲದೇ ನೇರವಾಗಿ ಹಾಸ್ಟೆಲ್ ಪ್ರವೇಶ ಕಲ್ಪಿಸಲಾಗುತ್ತಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯು ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದೆ. ಸ್ಥಳೀಯ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರಥಮ ಆದ್ಯತೆ ನೀಡುತ್ತೇವೆ ನಂತರ ಬೇರೆ ಜಿಲ್ಲೆ, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಆದ್ಯತೆ ನೀಡುತ್ತೇವೆ ಎಂದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ ಪ್ರಶ್ನಿಸಿದರು.
ಇದನ್ನೂ ಓದಿ : ಪ್ರೀತಿಯ ಫೆಡಲ್: 100 ರ ನೆನಪು; ಒಂದು ಪ್ರೀತಿಯ ಸಮಾರಂಭ
ಇಲಾಖೆಯೇ ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು, ಮುತುವರ್ಜಿಯಿಂದ ಕೂಡಲೇ ಆಯ್ಕೆ ಪಟ್ಟಿ ಬಿಡುಗಡೆ ಮಾಡಿಸಬೇಕು ಹಾಗೂ ಎಲ್ಲಾ ಹಾಸ್ಟೆಲ್ ಗಳನ್ನು ಕೂಡಲೇ ಯೋಗ್ಯವಾದ ಅಗತ್ಯ ಸೌಲಭ್ಯಗಳನ್ನು ಒಳಗೊಂಡು, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್ ಗಳನ್ನು ಕಲ್ಪಿಸಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಹಾಗೂ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 3.500 ರೂ ಕ್ಕೆ ಏರಿಕೆ ಮಾಡಬೇಕು ಎಂದು ಮುಖಂಡರಾದ ಮಹೇಶ್ ಮರೋಳ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸುನೀಲ್ ಕುಮಾರ್ ಎಲ್, ಅರುಣ್ ಲಮಾಣಿ, ಬೀರೇಶ್ ಕಂಬಳಿ, ಚಂದ್ರು ಹೆಚ್, ಲಕ್ಷ್ಮಣ, ನಿಖಿಲ್ ಹೆಚ್, ಝಮಲಶಾಬ್, ನಿಂಗರಾಜ ಹೊಸಮನಿ, ಯಶವಂತ್ ಲಮಾಣಿ, ಸಂದೇಶ ಆರ್ ಹೆಚ್, ಮಹಾಂತೇಶ್ ಲಮಾಣಿ, ನಿಂಗರಾಜ ಮೂಲಂಗಿ, ವೀರೇಶ್ ಸೊಟ್ಟಪ್ಪನವರ್, ಪ್ರಶಾಂತ್ ಬಾರ್ಕಿ, ಮನೋಜ್ ಕಣವಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ನೋಡಿ : ಸ್ವತಂತ್ರ ಪತ್ರಕರ್ತರ ಮೇಲೆ ಹಲ್ಲೆ | ಸ್ಥಳದಲ್ಲಿ ನಡೆದ ಘಟನೆ ಬಗ್ಗೆ ಸತ್ಯ ಬಿಚ್ಚಿಟ್ಟ ರಜತ್ ಕಿಶನ್ |Janashakthi ಹಾಸ್ಟೆಲ್
