ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪ ಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿದಾರರ ಹಾಗೂ ಪ್ರತಿವಾದಿಗಳ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ, ಅರ್ಜಿಯಲ್ಲಿ ಉಲ್ಲೇಖಿಸಲಾದ ನಕಲಿ ಜಾತಿ ಪ್ರಮಾಣಪತ್ರಗಳು ಹಾಗೂ ಇತರೆ ಅನರ್ಹರಿಗೆ ನೀಡಿದ್ದಾರೆ ಎನ್ನಲಾದ ಜಾತಿ ಪ್ರಮಾಣಪತ್ರಗಳ ಕುರಿತು ಸಂಬಂಧಿಸಿದವರಿಗೆ ಮಾರ್ಚ್ 27ರೊಳಗೆ ನೋಟಿಸ್ ನೀಡಿ ಆದಷ್ಟು ಶೀಘ್ರವಾಗಿ ಕ್ರಮ ಜರುಗಿಸಬೇಕು.
ಆ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸರ್ಕಾರದ ಪರ ವಿಶೇಷ ವಕೀಲ ಸಿ.ಜಗದೀಶ್ ಅವರಿಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 2ಕ್ಕೆ ಮುಂದೂಡಿದೆ.