ಕಲಬುರಗಿ: ಬಿ.ಇಡಿ ಪರೀಕ್ಷೆಗೆ ಹೊರ ರಾಜ್ಯದ ನಕಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ ಆರೋಪದಡಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಸೇರಿ ಐವರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ, ಅಲ್‌ಬದರ್ ಕಾಲೇಜಿನ ಪ್ರಾಂಶುಪಾಲ ಮಲ್ಲಮ್ಮ ಮಂಠಾಳೆ, ಬಿ.ಇಡಿ ವಿಷಯ ನಿರ್ವಹಕ ಸ್ವರೂಪ ಭಟ್ಟರ್ಕಿ, ಲಿಖಿತ ಪರೀಕ್ಷೆ ಹಿರಿಯ ಮೇಲ್ವಿಚಾರಕ ಮೌನೇಶ ಅಕ್ಕಿ ಮತ್ತು ಇಂದಿರಾ ಗಾಂಧಿ ಬಿ.ಇಡಿ ಕಾಲೇಜು ಅಧ್ಯಕ್ಷ ಮೌಲಾ ಪಟೇಲ್ ವಿರುದ್ಧ ನಾಗರಾಜ ಹಣಮಂತರಾಯ ಅವರು ನೀಡಿದ ದೂರಿನ ಅನ್ವಯ ಬಿಎನ್‌ಎಸ್ ಸೆಕ್ಷನ್ 319 (2), 318 (4), 336 (2) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ನಿಧನ, ಒಬ್ಬರು ಅಸ್ವಸ್ಥ, ಬಾಲಕ ನಾಪತ್ತೆ!
2024ನೇ ಸಾಲಿನ ಜುಲೈ 1ರಿಂದ 7ರ ವರೆಗೆ ನಡೆದ ಬಿ.ಇಡಿ ಪರೀಕ್ಷೆಯ ಅಲ್ ಬದರ್ ಕಾಲೇಜಿನಲ್ಲಿ ಅಕ್ರಮವಾಗಿ ಹೊರ ರಾಜ್ಯದ 100 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ, ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ 24ಸಿ46501ರಿಂದ 24ಸಿ46522 ವರೆಗಿನ (22 ವಿದ್ಯಾರ್ಥಿ) ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿಸಲಾಗಿತ್ತು. ಈ ಆದೇಶ ಉಲ್ಲಂಘಿಸಿ 24ಸಿ46501ರಿಂದ 24ಸಿ46600ವರೆಗೆ ನಕಲು ನೋಂದಣಿ ಸಂಖ್ಯೆಗಳ ಮೇಲೆ ಪರೀಕ್ಷೆ ಬರೆಯಲು ಅವಕಾಶ ನೀಡಿ, ಸರ್ಕಾರ ಮತ್ತು ವಿದ್ಯಾರ್ಥಿಗಳಿಗೆ ವಂಚಿಸಲಾಗಿದೆ ಎಂದು ದೂರನಲ್ಲಿ ಉಲ್ಲೇಖಿಸಲಾಗಿದೆ.
ಪರೀಕ್ಷೆ ಮುಗಿಯುವ ಅರ್ಧ ಗಂಟೆ ಮೊದಲೇ ವಿದ್ಯಾರ್ಥಿಗಳು ಹೊರ ಬರುತ್ತಿದ್ದರು. ಅವರ ಕೈಯಲ್ಲಿನ ಪ್ರವೇಶ ಪತ್ರಗಳು ಪರಿಶೀಲಿಸಿದಾಗ ಕೈ ಬರಹದಲ್ಲಿ ಇರುವುದು ಕಂಡುಬಂತು. ಯುಜಿಸಿ ಪ್ರಕಾರ ಯುಯುಸಿಎಂಎಸ್‌ನಲ್ಲಿ ವಿದ್ಯಾರ್ಥಿಗಳ ಪರೀಕ್ಷೆ ಪ್ರವೇಶ ಪತ್ರ ನೀಡಬೇಕು ಎಂಬ ನಿಯಮವಿದೆ. ಆದರೆ, ಕೈ ಬರಹದ ಪ್ರವೇಶ ಪತ್ರ ನೋಡಿದರೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬರುತ್ತಿದೆ ಎಂದು ಆರೋಪಿಸಿ ನಾಗರಾಜ ಅವರು ದೂರು ದಾಖಲಿಸಿದ್ದಾರೆ.ನಕಲಿ
ಇದನ್ನು ನೋಡಿ : ಕೇಂದ್ರ ಬಜೆಟ್ 2024 | ಸುಳ್ಳು ಅಂಕಿ ಅಂಶಗಳಿರುವ ದೇಶ ವಿರೋಧಿ ಬಜೆಟ್ – ಡಾ. ಕೆ.ಪ್ರಕಾಶ್ Janashakthi Media