ಆಗಸ್ಟ್‌ ವೇಳೆಗೆ ಮೋದಿ ಸರ್ಕಾರ ಪತನ – ಲಾಲು ಯಾದವ್ ಸ್ಫೋಟಕ ಹೇಳಿಕೆ

ಪಾಟ್ನಾ :  ಕೇಂದ್ರದ ನರೇಂದ್ರ ಮೋದಿ ಸರಕಾರ ದುರ್ಬಲವಾಗಿದೆ ಮತ್ತು ಒಂದು ತಿಂಗಳೊಳಗೆ ಪತನವಾಗಬಹುದು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಶುಕ್ರವಾರ ಹೇಳಿದ್ದಾರೆ.

ಆರ್‌ಜೆಡಿ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲಾಲು ಅವರು ಸರ್ಕಾರದ ಪತನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. 300 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ಬಿಜೆಪಿ 240 ಸ್ಥಾನಗಳಿಗೆ ಸೀಮಿತವಾಯಿತು ಮತ್ತು ಸಮ್ಮಿಶ್ರ ಸರ್ಕಾರ ರಚಿಸಲು ಮೈತ್ರಿ ಪಾಲುದಾರರನ್ನು ಅವಲಂಬಿಸಬೇಕಾಯಿತು. ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ಒಂದು ತಿಂಗಳೊಳಗೆ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು “ಅತ್ಯಂತ ದುರ್ಬಲವಾಗಿದೆ” ಎಂದು ಲಾಲು ಯಾದವ್ ಹೇಳಿದ್ದಾರೆ. “ಎಲ್ಲಾ ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಲು ನಾನು ಮನವಿ ಮಾಡುತ್ತೇನೆ, ಏಕೆಂದರೆ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು. ದೆಹಲಿಯಲ್ಲಿ ಮೋದಿ ಸರ್ಕಾರವು ತುಂಬಾ ದುರ್ಬಲವಾಗಿದೆ ಮತ್ತು ಆಗಸ್ಟ್ ವೇಳೆಗೆ ಅದು ಬೀಳಬಹುದು” ಎಂದು ಲಾಲು ಯಾದವ್ ಹೇಳಿದ್ದಾರೆ.

ಇದನ್ನೂ ಓದಿಎಲ್ಲರ ಕಣ್ಣು ಲೋಕಸಭಾ ಸ್ಪೀಕರ್ ಮೇಲೆ!

ಸಿದ್ಧಾಂತದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಅಂತಹ ಯಾವುದೇ ಪರಿಸ್ಥಿತಿಗೆ ಸಿದ್ಧರಾಗಿರಲು ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದ ಪ್ರಸಾದ್, ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಆರ್‌ಜೆಡಿ ಐದು ವರ್ಷಗಳ ಹಿಂದೆ ಹೋಲಿಸಿದರೆ ತನ್ನ ಸ್ಥಾನಗಳ ಸಂಖ್ಯೆ ಮತ್ತು ಮತ ಶೇಕಡಾವಾರು ಪ್ರಮಾಣವನ್ನು ಸುಧಾರಿಸಿದೆ ಎಂದು ಹೇಳಿದರು. ಪ್ರಸಾದ್ ಅವರು, ‘ಬಿಹಾರ ವಿಧಾನಸಭೆಯಲ್ಲಿ ನಾವು ದೀರ್ಘಕಾಲದಿಂದ ದೊಡ್ಡ ಪಕ್ಷವಾಗಿದ್ದೇವೆ. ಇತರ ಹಲವು ಪಕ್ಷಗಳಂತೆ ನಾವು ಎಂದಿಗೂ ಸಿದ್ಧಾಂತದಲ್ಲಿ ರಾಜಿ ಮಾಡಿಕೊಂಡಿಲ್ಲ ಎಂದಿದ್ದಾರೆ.

ತಂದೆಯ ಮಾತುಗಳನ್ನು ಪ್ರತಿಧ್ವನಿಸುತ್ತಾ, ಲಾಲು ಪ್ರಸಾದ್ ಯಾದವ್ ಅವರ ಮಗ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಬಿಹಾರದಲ್ಲಿ ಶೀಘ್ರ ವಿಧಾನಸಭಾ ಚುನಾವಣೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ. ಡಿಸೆಂಬರ್ 2024 ಅಥವಾ 2025ರ ಆರಂಭದಲ್ಲಿ ಚುನಾವಣೆ ನಡೆದರೂ ಬಿಹಾರದಲ್ಲಿ ಮಹಾಘಟಬಂಧನ್ (ಇಂಡಿಯಾ ಮೈತ್ರಿ) ಸರ್ಕಾರ ರಚನೆಯಾಗುವ ಸಾಧ್ಯತೆಯನ್ನು ಅವರು ಒತ್ತಿ ಹೇಳಿದ್ದಾರೆ.

ಲಾಲು ಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಬಿಹಾರ ಘಟಕದ ಮಾಜಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ನಿತ್ಯಾನಂದ ರಾಯ್, ಲಾಲು ಅವರು ಮುಂಗೇರಿ ಲಾಲ್ ಅವರ ಸುಂದರ ಕನಸುಗಳನ್ನು ನೋಡುತ್ತಿದ್ದಾರೆ. ಲಾಲು ಭ್ರಮೆಯಲ್ಲಿದ್ದಾರೆಂದು ಕುಟುಕಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *