ತುಮಕೂರು: ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಳ್ಳು ಪೋಸ್ಟ್
ಭಾರತದ ಬಾವುಟಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ. ಆ ಮೂಲಕ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ತುಮಕೂರು ನಗರದ ಜಯನಗರ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತೆ ಶೇರ್ ಮಾಡಿರುವ ಪೋಸ್ಟ್ ನಕಲಿ ಮತ್ತು ಸುಳ್ಳು ಎಂದು ಸತ್ಯ ಪರಿಶೀಲನಾ ವಿಭಾಗ ಖಚಿತಪಡಿಸಿದ್ದು, ನಂತರ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಫ್ಯಾಕ್ಟ್‌ಚೆಕ್ | ಪಾಕಿಸ್ತಾನ ಧ್ವಜ ವಿವಾದ; ಸುಳ್ಳು ಸುದ್ದಿ ಹರಡಿದ ಏಷ್ಯಾನೆಟ್ ಸುವರ್ಣ ನ್ಯೂಸ್!
ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಎನ್ನುವ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್‍ನವರಿಗೆ? BoyCott Lulu Mall ಎಂಬ ಹ್ಯಾಷ್ ಟ್ಯಾಗ್ ಬಳಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಶಕುಂತಲಾ ಟ್ವೀಟ್ ಮಾಡಿದ್ದರು.
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರತಿನಿಧಿಸುವ ವಿವಿಧ ದೇಶಗಳ ಧ್ವಜಗಳನ್ನು ಮಾಲ್‌ನಲ್ಲಿ ಪ್ರದರ್ಶಿಸಲಾಯಿತು. ಎಲ್ಲಾ ದೇಶಗಳ ಧ್ವಜಗಳನ್ನು ಸಮಾನ ಎತ್ತರದಲ್ಲಿ ಇರಿಸಲಾಗಿತ್ತು. ಆದರೆ, ಪಾಕಿಸ್ತಾನದ ಧ್ವಜದ ಕೆಳಗೆ ಭಾರತದ ಧ್ವಜ ಕಾಣಿಸುವ ರೀತಿಯಲ್ಲಿ ಫೋಟೊ ತೆಗೆಯಲಾಗಿದೆ.
ಈ ಫೋಟೊವು ಉದ್ದೇಶಪೂರ್ವಕವಾಗಿ ತೊಂದರೆ ಸೃಷ್ಟಿಸುವುದಾಗಿದೆ ಮತ್ತು ಎಡಿಟ್ ಮಾಡಿದ್ದಾಗಿದೆ. ಪೋಸ್ಟ್ ಮೂಲಕ ಜನರನ್ನು ಕೆರಳಿಸುವ ಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @DKShivakumar ರವರೇ.#BoyCottLuluMallBengaluru pic.twitter.com/MZ7nxXqXlO
— ಶಕುಂತಲ ನಟರಾಜ್🪷Shakunthala (@ShakunthalaHS) October 10, 2023
ವಿಡಿಯೋ ನೋಡಿ: ಚುನಾಯಿತ ಸರ್ವಾಧಿಕಾರ ಪ್ರಭುತ್ವದಿಂದ ” ನ್ಯೂಸ್ ಕ್ಲಿಕ್ ಮೇಲೆ ದಾಳಿ”, ಅಪಾಯದಲ್ಲಿರುವ ಭಾರತದ ಪ್ರಜಾಪ್ರಭುತ್ವ