ಪಾಟ್ನಾ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಯ ಒಬ್ಬರಿಗೆ ಸರಕಾರಿ ನೌಕರಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಭರವಸೆ ಈಡೇರಿಸಲು ಸರಕಾರ ಅಧಿಕಾರಕ್ಕೆ ಬಂದ 20 ದಿನಗಳಲ್ಲಿ ಶಾಸನ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ನನ್ನತ್ತ ಶೂ ಎಸೆಯುವ ಮೂಲಕ ನೀ ಕುಬ್ಜನಾಗಿಬಿಟ್ಟೆ : ಕೆ.ಮಹಾಂತೇಶ್
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ನಿರುದ್ಯೋಗ ಅತ್ಯಂತ ದೊಡ್ಡ ಸಮಸ್ಯೆ ಎಂಬ ಸಂಗತಿಯನ್ನು ಈ ನಾಚಿಕೆಗೇಡು ಸರಕಾರ 20 ವರ್ಷಗಳಾದರೂ ಅರ್ಥ ಮಾಡಿಕೊಳ್ಳಲೇ ಇಲ್ಲ. ಒಂದು ವೇಳೆ ವಿರೋಧ ಪಕ್ಷಗಳ ಮೈತ್ರಿಕೂಟವೇನಾದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಒಬ್ಬರಿಗೆ ಸರಕಾರಿ ನೌಕರಿ ನೀಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ನೋಡಿ : ನಮಗೆ 10 ಸಾವಿರ ಪಿಂಚಣಿ ನೀಡಿ – ವಿಕಲಚೇತನರ ಆಗ್ರಹ Janashakthi Media
