ಬೆಂಗಳೂರು : ಸಂಯುಕ್ತ ಕರ್ನಾಟಕ ಕಿಸಾನ್ ಮೋರ್ಚಾ ವತಿಯಿಂದ ಜೂನ್ 26 ರಂದು ‘ಕೃಷಿ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ’ ಘೋಷವಾಕ್ಯದಡಿ ರಾಜಭವನ ಚಲೋ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಎಲ್ಲ ರಾಜ್ಯಗಳಲ್ಲೂ ರಾಜ್ಯಪಾಲರ ಕಚೇರಿ ಮುಂದೆ ಧರಣಿ ನಡೆಸಿ, ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಅದರಂತೆ ರಾಜ್ಯದಲ್ಲೂ ಧರಣಿ ನಡೆಯಲಿದೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.
26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮೌರ್ಯ ವೃತ್ತದಿಂದ ಪಾದಯಾತ್ರೆಯಲ್ಲಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು. ರ‍್ಯಾಲಿಯಲ್ಲಿ ಒಟ್ಟು 42 ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲ್ಲಿದ್ದಾರೆ’ ಎಂದು ಸಂಘಟಿಕರು ತಿಳಿಸಿದ್ದಾರೆ.
ಇದನ್ನೂ ಓದಿ : ಮೈಷುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣಕ್ಕೆ ಮುಂದಾದ ಸರಕಾರ : ಟೆಂಡರ್ ಪ್ರಕ್ರಿಯೆ ರದ್ದಿಗೆ ರೈತರ ಆಗ್ರಹ
ಭಾರತದ ಇತಿಹಾಸದಲ್ಲಿ 1975ರ ಜೂನ್ 26 ಕರಾಳ ದಿನ, ಆ ದಿನ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಈಗಿನ ಮೋದಿ ಸರ್ಕಾರದ ಪರಿಸ್ಥಿತಿ ಕೂಡ ಅದಕ್ಕಿಂತ ಭಿನ್ನವಾಗಿಲ್ಲ, ಇದೊಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ. ನಾಡಿದ್ದು 26ಕ್ಕೆ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಾವು ಪ್ರತಿಭಟನೆ ಆರಂಭಿಸಿ 7 ತಿಂಗಳುಗಳು ಕಳೆಯುತ್ತಿವೆ. ಭಾರತದ ಇತಿಹಾಸದಲ್ಲಿ 1975ರ ಜೂನ್ 26 ಕರಾಳ ದಿನ, ಆ ದಿನ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಈಗಿನ ಮೋದಿ ಸರ್ಕಾರದ ಪರಿಸ್ಥಿತಿ ಕೂಡ ಅದಕ್ಕಿಂತ ಭಿನ್ನವಾಗಿಲ್ಲ, ಇದೊಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ. ಜೂನ್ 26ಕ್ಕೆ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಾವು ಪ್ರತಿಭಟನೆ ಆರಂಭಿಸಿ 7 ತಿಂಗಳುಗಳು ಕಳೆಯುತ್ತಿವೆ. ಹೀಗಾಗಿ ಆ ಭಾರತದ ಇತಿಹಾಸದಲ್ಲಿ 1975ರ ಜೂನ್ 26 ಕರಾಳ ದಿನ, ಆ ದಿನ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಈಗಿನ ಮೋದಿ ಸರ್ಕಾರದ ಪರಿಸ್ಥಿತಿ ಕೂಡ ಅದಕ್ಕಿಂತ ಭಿನ್ನವಾಗಿಲ್ಲ, ಇದೊಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ. ನಾಡಿದ್ದು 26ಕ್ಕೆ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಾವು ಪ್ರತಿಭಟನೆ ಆರಂಭಿಸಿ 7 ತಿಂಗಳುಗಳು ಕಳೆಯುತ್ತಿವೆ. ಹೀಗಾಗಿ ಆ ದಿನವನ್ನು ” ಕೃಷಿ ರಕ್ಷಿಸಿ – ಪ್ರಜಾಪ್ರಭುತ್ವ ಉಳಿಸಿ” ಎಂಬ ಘೋಷಾವಾಕ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಕರ್ನಾಟಕ ಪ್ರಾಂತರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ತಿಳಿಸಿದ್ದಾರೆ.
ನಿರಂತರ ಸುದ್ದಿಗಳಿಗಾಗಿ : ನಮ್ಮ ವಾಟ್ಸಪ್ ಗುಂಪಿಗೆ ಸೇರಿ ಕೊಳ್ಳಿ
ಹೊಸದಾಗಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನವೆಂಬರ್ 26 ರಿಂದ ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ 2020, ರೈತ ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ರ ಒಪ್ಪಂದದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 550ಕ್ಕೂ ಅಧಿಕ ರೈತರು ಹೋರಾಟಕ್ಕಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಕೇಂದ್ರ ಸರ್ಕಾರ ಮತ್ತು ರೈತ ಪ್ರತಿನಿಧಿಗಳ ಮಧ್ಯೆ ಹಲವು ಸುತ್ತುಗಳ ಮಾತುಕತೆ ನಡೆದರೂ ಕೂಡ ಪ್ರಯೋಜನವಾಗಿಲ್ಲ. ಹಾಗಾಗಿ ನಮ್ಮ ಹೋರಾಟ ತೀವೃಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ : ಗೋಲ್ಡನ್ ಹಟ್ ಡಾಬಾ ತಲುಪುವ ಮಾರ್ಗವನ್ನು ಬಂದ್ ಮಾಡಿದ ಸರಕಾರ: ಇದು ಅಘೋಷಿತ ತುರ್ತುಪರಿಸ್ಥಿತಿಯೇ?