ಇಂಫಾಲ್: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಜುಲೈ 11ರ ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಪರಿಚಿತ ಶಸ್ತ್ರಧಾರಿಗಳು ಗುಂಡಿಕ್ಕಿ 53 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ
ಮೃತರನ್ನು ಹೌಲಾಲ್ ಸಿಂಗ್ಸಿತ್ ಎಂದು ಗುರುತಿಸಲಾಗಿದ್ದು, ಅವರು ಕುಕಿ ಬಹುಸಂಖ್ಯಾತರಿರುವ ಗೋವಾಜಾಂಗ್ ಗ್ರಾಮದ ನಿವಾಸಿಯಾಗಿದ್ದರು. ಘಟನೆ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.
ದಾಳಿಯ ವೇಳೆ ಅವರ ಪತ್ನಿ ನೆಮ್ನೆಇಕಿಮ್ ಸಿಂಗ್ಸಿತ್ ಅವರೂ ಜೊತೆಗಿದ್ದು, ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಇದನ್ನೂ ಓದಿ: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ನಿಧನ
ಗ್ರಾಮಸ್ಥರ ಪ್ರಕಾರ, ಶನಿವಾರ ಮಧ್ಯಾಹ್ನ ಸುಮಾರು 4 ಗಂಟೆ ವೇಳೆಗೆ ಸುಮಾರು 20 ಸುತ್ತು ಗುಂಡಿನ ಸದ್ದು ಕೇಳಿಬಂದಿದ್ದು, ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ.
ಘಟನೆ ತಿಳಿದ ತಕ್ಷಣ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ನಂತರ ಸಿಂಗ್ಸಿತ್ ಅವರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ.
ಇದನ್ನೂ ನೋಡಿ: ಬಿಎಲ್ಒ ಕಾರ್ಯದಿಂದ ಮುಕ್ತಗೊಳಿಸಿ: ಜಿಲ್ಲಾಧಿಕಾರಿ ಕಚೇರಿಗೆ ಅಂಗನವಾಡಿ ನೌಕರರ ಮುತ್ತಿಗೆ Janashakthi Media
