ಬಂಡೀಪುರದಲ್ಲಿ ಸಫಾರಿ ಮರು ಆರಂಭವನ್ನು ಖಂಡಿಸಿ ರೈತ ಸಂಘ ಪ್ರತಿಭಟನೆ

ಚಾಮರಾಜನಗರ: ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘದ ಮುಖಂಡರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭಿಸಿರುವುದನ್ನು ಖಂಡಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂದೆ ಫೆಬ್ರವರಿ 23ರಂದು ಪ್ರತಿಭಟನೆ ನಡೆಸಿದರು. ಬಂಡೀಪುರ

ಇದೇ ವೇಳೆ, ಮೈಸೂರು ಜಿಲ್ಲೆಯ ನಾಗರಹೊಳೆ ಪ್ರದೇಶದಲ್ಲಿ ಹುಲಿ ಸಫಾರಿಯು ಮಧ್ಯಾಹ್ನ 9 ಪ್ರವಾಸಿಗರೊಂದಿಗೆ ಆರಂಭವಾಯಿತು. ‘ಮಾನವ–ವನ್ಯಜೀವಿ ಸಂಘರ್ಷ ಕುರಿತು ವಸ್ತುಸ್ಥಿತಿ ಅಧ್ಯಯನ ಮಾಡದೆತಾಂತ್ರಿಕ ಸಮಿತಿ ನೀಡಿರುವ ಮಧ್ಯಂತರ ವರದಿಯ ಆಧಾರದ ಮೇಲೆ ಸರ್ಕಾರವು ಸಫಾರಿ ಮರು ಆರಂಭಿಸಿರುವುದು ಖಂಡನೀಯ’ ಎಂದು ಚಾಮರಾಜನಗರದಲ್ಲಿ ರೈತ ಮುಖಂಡರು ಆಕ್ರೋಶವ್ಯಕ್ತಪಡಿಸಿದರು.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯ ತನ್ನ ಗೌರವ ಧನ ಹಣದಿಂದ ಬಸ್ ತಂಗುದಾಣ ನಿರ್ಮಾಣ

‘ಸಫಾರಿ ಬಂದ್ ಆಗುವವರೆಗೂ ನಿರಂತರ ಪ್ರತಿಭಟನೆ ನಡೆಸಲಾಗುವುದು. ಫೆ.25ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಧರಣಿ ನಡೆಸಲಾಗುವುದು. ಮಣಿಯದಿದ್ದರೆ ಮಾರ್ಚ್‌ 1ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಾಗುವುದು’ ಎಂದು ಮುಖಂಡ ಹೊನ್ನೂರು ಪ್ರಕಾಶ್‌ ತಿಳಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ‘ರೈತ ಸಂಘಟನೆಗಳ ವಿರೋಧವನ್ನು ಅರಣ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅಕ್ರಮ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಇದನ್ನೂ ನೋಡಿ: “ಭಾರತ ಭಾರತವಾಗಿರಲಿ – ಯಾವ ಧರ್ಮರಾಷ್ಟ್ರವಾಗಿಯೂ ಬೇಡ.” – ಬಿ.ಎಂ.ಹನೀಫ್ Janashakthi Media

Donate Janashakthi Media

Leave a Reply

Your email address will not be published. Required fields are marked *