ರೈತರಿಗೆ 1ನೇ ಕಂತಿನಲ್ಲಿ 2000 ರೂ. ಬೆಳೆ ಪರಿಹಾರ ಘೋಷಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರಿಗೆ  1ನೇ ಕಂತಿನಲ್ಲಿ 2000 ರೂ. ಬೆಳೆ ಪರಿಹಾರ ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಬೆಳೆ ಪರಿಹಾರ 

ಗುರುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ.ಈಗ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2,000 ರೂ ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ. ಇನ್ನು ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. ರೂ.4,663 ಕೋಟಿ ಬೆಳೆ ನಷ್ಟ  ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು.ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ.ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ.ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ.ಹಣಕಾಸು ಸಚಿವರನ್ನು ನಮ್ಮ ಸಚಿವರು ಭೇಟಿ ಮಾಡಿದಾರೆ. ಕೇಂದ್ರ ಇವತ್ತಿನವರೆಗೆ ಸಭೆ ನಡೆಸಿಲ್ಲ.ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಕಲಬುರಗಿ ವಿವಿ ಮಹಾ ಎಡವಟ್ಟು| ಸಾವಿರಾರು ವಿದ್ಯಾರ್ಥಿಗಳ ಅಂಕಪಟ್ಟಿ ಮಾಯ!

ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ,ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ.ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ.ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ನಾನೇ ಭೇಟಿ ಮಾಡ್ತೀನಿ, ಸಮಯ ಕೊಡಿ ಎಂದು  ಪತ್ರ ಬರೆದಿದ್ದೀನಿ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ. ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು , ಮೇವಿಗೆ 327 ಕೋಟಿ ಬಿಡುಗಡೆ, 780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್‌ಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.

ವಿಡಿಯೋ ನೋಡಿ: ಶ್ರೀಮಂತರಿಗೆ ಒಳ್ಳೆಯ ದಿನ, ಬಡವರಿಗೆ ಕಣ್ಣೀರ ದಿನ ಇದು ಮೋದಿ ಸರ್ಕಾರದ ಸಾಧನೆ – ಎಸ್. ವರಲಕ್ಷ್ಮಿ

Donate Janashakthi Media

Leave a Reply

Your email address will not be published. Required fields are marked *