ಕೃಷಿ ವಿರೋಧಿ ಮೂರು ಕಾಯಿದೆಗಳನ್ನು ವಾಪಸು ಪಡೆದು ರೈತರನ್ನು ರಕ್ಷಣೆ ಮಾಡಬೇಕು:ಬಯ್ಯಾರೆಡ್ಡಿ,

ಕೋಲಾರ :  ವಿರೋಧಿ ಮೂರು ಕೃಷಿ ಕಾಯಿದೆಗಳನ್ನು ಇವತ್ತಿನ ಕಾಂಗ್ರೆಸ್ ನೇತೃತ್ವದ ಸರಕಾರ ಚುನಾವಣೆ ಪೂರ್ವದಲ್ಲಿ ಮಾತು ಕೊಟ್ಟಂತೆ ವಾಪಸು ಪಡೆದು ರೈತರನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಕೆ.ಪಿ.ಆರ್.ಎಸ್ ರಾಜ್ಯ ಅಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತ ವಿರೋಧಿಯಾದ ಭೂಸುಧಾರಣಾ ತಿದ್ದುಪಡಿ ಕಾಯಿದೆ, ಎಪಿಎಂಸಿ ತಿದ್ದುಪಡಿ, ಹಾಗೂ ಜಾನುವಾರು ಹತ್ಯೆ ನಿಯಂತ್ರಣ ಕಾಯ್ದೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೇ ವಾಪಸ್ ಪಡೆಯುವ ಕುರಿತು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದು ಅದರಂತೆ ಈಗ ಕಾಂಗ್ರೆಸ್ ನೇತೃತ್ವದ ಬಹುಮತದಿಂದ ಅಧಿಕಾರಕ್ಕೆ ನಿಮ್ಮದೇ ಸರಕಾರ ಅಧಿಕಾರದಲ್ಲಿ ಇದ್ದು ಕೂಡಲೇ ವಾಪಸು ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಜಾರಿ ಮಾಡಿದ್ದ ಕಾಯಿದೆಗಳನ್ನು ದೇಶಾದ್ಯಂತ ರೈತರು, ಕಾರ್ಮಿಕರು, ದಲಿತರ, ವಿಧ್ಯಾರ್ಥಿ ಯುವಜನರು, ಮಹಿಳೆಯರ ವಿರೋಧದಿಂದ ಕಾಯ್ದೆಗಳನ್ನು ಹೇಗೆ ಶಾಸನ ಬದ್ಧವಾಗಿ ವಾಪಸ್ ಪಡೆದಿದ್ದಾರೆ ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ರೂಪರೇಷೆಗಳನ್ನು ತಯಾರಿಸಿ ಆಂದೋಲನ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದ್ದನೂ ಓದಿ:ಬಿಜೆಪಿ ಸರಕಾರ ಎಂಎಸ್‍ಪಿ ಯಲ್ಲಿ ರೈತರಿಗೆ ಮೋಸ ಮಾಡುವುದನ್ನು ನಿಲ್ಲಿಸಬೇಕು : ಎಐಕೆಎಸ್

ಇಂತಹ ರೈತ ವಿರೋಧಿ ಕಾಯಿದೆಗಳಿಂದ ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ ಆದರೆ ತಿದ್ದುಪಡಿ ಮಾಡಿದ್ದರಿಂದ ಯಾರೂ ಬೇಕಾದರೂ ಎಷ್ಟು ಬೇಕಾದರೂ ಭೂಮಿ ಖರೀದಿ ಮಾಡಬಹುದು ಎಂಬ ತಿದ್ದುಪಡಿ‌ ಮಾಡಲಾಗಿದೆ. ಈ ಮೂಲಕ ಕಾರ್ಪೊರೇಟ್ ವಲಯಕ್ಕೆ ಕೃಷಿಯನ್ನು ನೀಡಲು ಮುಂದಾಗಿದೆ ಎಪಿಎಂಸಿ ಮಾರುಕಟ್ಟೆ ಹೊರಗೂ ಕೂಡ ಮಾರಾಟ ಮಾಡಲು ಅವಕಾಶ ಕೊಟ್ಟಿದೆ ಜೊತೆಗೆ ಗೋ ಹತ್ಯೆ ಕಾಯಿದೆಯಿಂದ ಹೈನುಗಾರರಿಗೆ ನಷ್ಟವಾಗಿದೆ. ಗೋರಕ್ಣಣೆ ಮಾಡುವವರು ಹೈನುಗಾರರು ಅವರಿಗೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ ೨೫ ಲಕ್ಷ ಕುಟುಂಬಗಳು ಈ ಕಾಯಿದೆಯಿಂದ ಬೀದಿಗೆ ಬೀಳಲಿದ್ದಾರೆ ಅದರಿಂದ ಮುಂದಿನ ಬಜೆಟ್ ಅಧಿವೇಶನದಲ್ಲಿ ಕಾಯಿದೆಗಳನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ ಯಾವುದೇ ಕಾರಣಕ್ಕೂ ವಿದ್ಯುತ್‌ ಖಾಸಗೀಕರಣ ಮಾಡಬಾರದು ರೈತರಿಗೆ ನೀಡುವ ವಿದ್ಯುತ್‌ ಸಬ್ಸಿಡಿ ಮುಂದುವರೆಯಬೇಕು ಒಂದು ವೇಳೆ ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಮಸೂದೆ ಅಂಗೀಕಾರ ಆದರೂ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಹಿಂಪಡೆಯಬೇಕು ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಸರಕಾರಿ ಭೂಮಿಯನ್ನು ಕಂಪನಿಗಳಿಗೆ, ರಾಜಕಾರಣಿಗಳಿಗೆ, ಬಲಾಢ್ಯರಿಗೆ ತಮಗೆ ಬೇಕಾದ ಮಠ ಮಾನ್ಯಗಳಿಗೆ ಮನ ಬಂದಂತೆ ಭೂಮಿ ಪರಭಾರೆ ಮಾಡಲಾಗುತ್ತಾ ಇದೆ ಕಾರ್ಪೊರೇಟ್ ಸಂಸ್ಥೆಗಳಿಗೆ ಪೂರಕವಾಗಿ ತಂದಿರುವ ಕಾಯ್ದೆಗಳನ್ನು ವಿರೋಧಿಸಬೇಕು ಜೊತೆಗೆ ನಂದಿನಿ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆಗೆ ಒಪ್ಪಂದ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೈಚೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆನಂದ್ ಕುಮಾರ್ ಇದ್ದರು

Donate Janashakthi Media

Leave a Reply

Your email address will not be published. Required fields are marked *