ರಾಯಚೂರು: ಕೃಷ್ಣಾ ಬಲದಂಡೆ ಹಾಗೂ ರಾಂಪೂರ ಏತನೀರಾವರಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಏಪ್ರಿಲ್ 20 ರ ವರೆಗೆ ವಾರಬಂದಿಯಂತೆ ನೀರು ಹರಿಸಲು ರೈತರು ಆಗ್ರಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದು, ಟ್ರಾಫಿಕ್ ಜಾಮ್ ಆಗಿದೆ. ಹಿಂಗಾರು ಬಿತ್ತನೆಯಾದ ಬೆಳೆಗಳನ್ನ ಉಳಿಸುವಂತೆ ರೈತರು ಒತ್ತಾಯಿಸಿದ್ದಾರೆ. ಕಾಲುವೆಗೆ ನೀರು ಹರಿಸುವುದನ್ನ ನಿಲ್ಲಿಸಿದರೆ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತೆ ಅಂತ ಅಳಲು ತೋಡಿಕೊಂಡಿದ್ದಾರೆ.
ಇದನ್ನು ಓದಿ :-ಸಂಭಾಜಿನಗರ| ಕಬ್ಬು ಸಾಗಿಸುತ್ತಿದ್ದ ಟ್ರಕ್ ಪಲ್ಟಿ; 6 ಕಾರ್ಮಿಕರು ಸಾವು
ರೈತರು ಗುರಗುಂಟಾದಿಂದ ಲಿಂಗಸುಗೂರು ಎಸಿ ಕಚೇರಿವರೆಗೆ ಈಗಾಗಲೇ ನೂರಾರು ಟ್ರ್ಯಾಕ್ಟರ್ ನಿಂದ ಪ್ರತಿಭಟನೆ ಮಾಡಿದ್ದಾರೆ. ಹಂತ ಹಂತವಾಗಿ ಪ್ರತಿಭಟನೆ ಮಾಡುತ್ತಿದ್ದರೂ ಅಧಿಕಾರಿಗಳಿಂದ ಸ್ಪಂದನೆ ಸಿಗದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹೋರಾಟ ನಡೆದಿದೆ.