ಚನ್ನರಾಯಪಟ್ಟಣ ರೈತ ಹೋರಾಟ: 1777 ಎಕರೆ ಭೂಸ್ವಾಧೀನಕ್ಕೆ ತಡೆ : ಸಚಿವ ಸಂಪುಟ ನಿರ್ಣಯ

ಬೆಂಗಳೂರು : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ಜಯ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 1777 ಎಕರೆ ಡಿನೋಟಿಫೈಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್ ತಿಳಿಸಿದರು.

ಡಿಸೆಂಬರ್‌ 04 ರಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಖಚಿತಪಡಿಸಿದರು.  2025 ಜುಲೈ 15ರಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ 1777ಎಕರೆ ಡಿನೋಟಿಫೈಗೆ ಒಪ್ಪಿಗೆ ನೀಡಿದ್ದಾರೆ ಎಂದರು.

ಇದನ್ನೂ ಓದಿ : ಭೂಮಿ ಗೆದ್ದ ರೈತರು | ಸರ್ಕಾರವನ್ನು ನಡುಗಿಸಿದ ಐತಿಹಾಸಿಕ ಹೋರಾಟ

“ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಘೋಷಿಸಿರುವುದರಿಂದ ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನವನ್ನು ರದ್ದುಪಡಿಸಬೇಕೆಂದು” ರೈತರು ಸರ್ಕಾರವನ್ನು ಒತ್ತಾಯಿಸಿದ್ದರು. ಡಿಸೆಂಬರ್‌ 02 ರಂದು ನಡೆದ ಸಭೆಯಲ್ಲಿಯೂ ದೇವನಹಳ್ಳಿ ರೈತರನ್ನು ಅದೇ ಮಾತುಗಳನ್ನು ಪುನರುಚ್ಚರಿಸಿದ್ದರು.

ಹೋರಾಟದ ಹಿನ್ನೆಲೆ :  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 1777 ಏಕರೆ ಭೂಮಿಯನ್ನು ಸ್ವಾಧೀನ ಪಡಸಿಕೊಳ್ಳಲು ಸರಕಾರ ಮುಂದಾಗಿತ್ತು. ಸರಕಾರದ ನಡೆಯನ್ನು ವಿರೋಧಿಸಿ 1339 ದಿನಗಳಿಂದ ರೈತರು ಧರಣಿ ನಡೆಸಿದ್ದರು. ದೇವನಹಳ್ಳಿ, ಬೆಂಗಳೂರು ಸೇರಿದಂತೆ ಹಲವು ಧರಣಿಗಳನ್ನು ನಡೆಸಿದ್ದ ರೈತರು ಸರಕಾರಕ್ಕೆ ಅಂತಿಮ ಎಚ್ಚರಿಕೆಯನ್ನು ನೀಡಿದ್ದರು.  ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಈ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ್ದವು.

ಇದನ್ನೂ ನೋಡಿ : ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ಪ್ರವಾಸಿಗರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಿ -ಮುನೀರ್ ಕಾಟಿಪಳ್ಳ Janashakthi Media

 

 

Donate Janashakthi Media

Leave a Reply

Your email address will not be published. Required fields are marked *