ಕೃಷಿ ಕಾನೂನಿಗೆ ವರ್ಷ: ಜೂನ್​.5 ರಂದು ಕ್ರಾಂತಿ ದಿವಸ ಆಚರಣೆ, ಬಿಜೆಪಿ ನಾಯಕರ ಮನೆ ಎದುರು ಪ್ರತಿಭಟನೆಗೆ ಕರೆ

ನವದೆಹಲಿ: ಕೇಂದ್ರ ಕೃಷಿ ಕಾನೂನನ್ನು ವಿರೋಧಿಸಿರುವ ರೈತರು ಜೂ.5 ರಂದು ಸಂಪೂರ್ಣ ಕ್ರಾಂತಿ ದಿವಸ್ ಆಚರಣೆಗೆ ನಿರ್ಧರಿಸಿದ್ದಾರೆ. ಕಾನೂನಿನ ಪ್ರತಿಗಳನ್ನು ಬಿಜೆಪಿ ಸಂಸದರು ಹಾಗೂ ಶಾಸಕರ ಕಚೇರಿಯ ಎದುರು ಕಾನೂನು ಪ್ರತಿ ದಹಿಸುವ ಮೂಲಕ ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ ಹೇಳಿದೆ.

ಸಂಸತ್ ನಲ್ಲಿ ಕಳೆದ ವರ್ಷ ಸುಗ್ರೀವಾಜ್ಞೆ ಹೊರಡಿಸಿ ಕೇಂದ್ರ ಸರ್ಕಾರ ಕೃಷಿ ಕಾನೂನು ಜಾರಿಗೊಳಿಸಿತ್ತು ನಂತರ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು.  ರೈತರು ಕೇಂದ್ರದ ಕಾಯ್ದೆಗಳನ್ನು ವಿರೋಧಿಸಿರುವ ರೈತರು ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ವರ್ಷ ನವೆಂಬರ್ ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮೇ 26: “ಕರಾಳ ದಿನ” ಆಚರಣೆಗೆ ಐತಿಹಾಸಿಕ ಜನಸ್ಪಂದನೆ

1974 ರ ಜೂ.05 ರಂದು ಜಯಪ್ರಕಾಶ್ ನಾರಾಯಣ್ ಸಂಪೂರ್ಣ ಕ್ರಾಂತಿ ಘೋಷಿಸಿ ಕೇಂದ್ರ ಸರ್ಕಾರದ ವಿರುದ್ಧ ಚಳುವಳಿಯನ್ನು ಪ್ರಾರಂಭಿಸಿದ್ದರು. ಕಳೆದ ವರ್ಷ ಜೂ.05 ರಂದು ಕೇಂದ್ರ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು.

ಬಿಜೆಪಿ ಸಂಸದರು ಶಾಸಕರ ಮನೆ ಮುಂದೆ ಪ್ರತಿಭಟನೆ :  ‘ಜೂನ್ 5ರಂದು ದೇಶಾದ್ಯಂತ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲಾಗುವುದು ಎಂದು ತಿಳಿಸಿದೆ. ಅಂದು ಬಿಜೆಪಿ ಸಂಸದರು, ಶಾಸಕರು ಮತ್ತು ಜನಪ್ರತಿನಿಧಿಗಳ ಕಚೇರಿಗಳ ಮುಂದೆ ಮೂರು ಕೃಷಿ ಕಾನೂನುಗಳ ಪ್ರತಿಗಳನ್ನು ಸುಡುವಂತೆ ನಾವು ನಾಗರೀಕರಿಗೆ ಮನವಿ ಮಾಡುತ್ತೇವೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ಹೇಳಿಕೆಯಲ್ಲಿ ತಿಳಿಸಿದೆ.  ರೈತ ಹೋರಾಟವನ್ನು ಬಲಪಡಿಸಲು ಪಂಜಾಬಿನ ದೋಬಾ ಪ್ರದೇಶದ ಅತಿ ಹೆಚ್ಚು ಸಂಖ್ಯೆಯಲ್ಲಿ ರೈತರು ಶನಿವಾರ ಪ್ರತಿಭಟನಾ ಗಡಿಗಳಿಗೆ ಬಂದಿದ್ದಾರೆ. ಆಂದೋಲನವನ್ನು ಮುನ್ನಡೆಸುವ ನಿಟ್ಟಿನಲ್ಲಿ ಇನ್ನೂ ಅನೇಕ ರೈತರು ಬಂದು ಸೇರುವ ನಿರೀಕ್ಷೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ವ್ಯಕ್ತಪಡಿಸಿದೆ.

ಇದನ್ನೂ ಓದಿ : ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಮೇಲೆ ಪ್ರಕೃತಿಯ ದಾಳಿ

Donate Janashakthi Media

Leave a Reply

Your email address will not be published. Required fields are marked *