ತೆಲಂಗಾಣ: ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕುಡುಕ ತಂದೆಯೊಬ್ಬ 14 ವರ್ಷದ ಮಗನನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದಲ್ಲಿ ಶನಿವಾರ ರಾತ್ರಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಸಂಭವಿಸಿದೆ.
ತಡವಾಗಿ ಮನೆಗೆ ಬಂದಿದ್ದಕ್ಕಾಗಿ ಅವನ ತಂದೆ ಆ ಬಾಲಕನನ್ನು ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದರು. ವ್ಯಕ್ತಿ ತನ್ನ ಮಗನ ಎದೆಗೆ ಹೊಡೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮಣಿಪುರ: ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ!
ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆತ ಪ್ರಸ್ತುತ ಪರಾರಿಯಾಗಿದ್ದಾನೆ.
ಇದನ್ನೂ ನೋಡಿ: ರೈತ ನಾಯಕ ವಿಜೂ ಕೃಷ್ಣನ್ ಕೇಂದ್ರ ಬಜೆಟ್‌ಗೆ ಸೊನ್ನೆ ಅಂಕ ಕೊಟ್ಟಿದ್ಯಾಕೆ? Janashakthi Media