ಫೆ.27ಕ್ಕೆ ಬೆಳಗಾವಿಗೆ ಮೋದಿ ಭೇಟಿ ಹಿನ್ನೆಲೆ; ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ಬೆಳಗಾವಿ: ರಾಜ್ಯಾದ್ಯಂತ ನಾಳೆಯಿಂದ(ಫೆಬ್ರವರಿ 27) ಪ್ರಥಮ ವರ್ಷದ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳು ಮಾರ್ಚ್‌ 6ರಂದು ಕೊನೆಗೊಳ್ಳಲಿದೆ. ಬೆಳಗಾವಿಗೆ ಪ್ರಧಾನಿ ನರೆಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರಧಾನಿ ಮೋದಿಯವರ ಭೇಟಿ ಹಿನ್ನೆಲೆಯಲ್ಲಿ  ಬಸ್ ಸಂಚಾರ ವ್ಯತ್ಯಯ ಆಗಲಿದೆ. ನಗರದ ವಿವಿಧೆಡೆ ಸಂಚಾರ ಮಾರ್ಗಗಳು ಬದಲಾವಣೆಯಾಗುವ ಸಾಧ್ಯತೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಇಲಾಖೆಯ ಉಪನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತ ಎಂದು ಸ್ಪಷ್ಟಪಡಿಸಿರುವ ಇಲಾಖೆಯು, ಎರಡನೇ ದಿನದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ನೀಡಿದೆ. ಫೆಬ್ರವರಿ 27ರಂದು ನಡೆಯಬೇಕಿದ್ದ ಪರೀಕ್ಷೆಯು ಮಾರ್ಚ್​ 6ಕ್ಕೆ ಮುಂದೂಡಲಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಗೆ ಓದಿಕೊಂಡು ಸಿದ್ದರಾಗಿರಲು ಸೂಚಿಸಲಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *