ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ದ್ವಿತೀಯ ಪಿಯುಸಿ ಪರೀಕ್ಷೆ-2, 3 ಬರೆಯಲು ಸಂಪೂರ್ಣ ಶುಲ್ಕ ವಿನಾಯ್ತಿ ಘೋಷಣೆ.!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2, 3 ಬರೆಯೋದಕ್ಕೆ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಪರೀಕ್ಷಾ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಪಿಯುಸಿ

ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ ಎಂದಿದ್ದಾರೆ.

ಪಿಯು ಪರೀಕ್ಷೆ – 2 ಏಪ್ರಿಲ್‌ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್‌ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್‌ 9 ರಿಂದ ಏಪ್ರಿಲ್‌ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ದ್ವಿತೀಯ ಪಿಯು ಪರೀಕ್ಷೆ-1ರ ಫ‌ಲಿತಾಂಶ ಪ್ರಕಟಿಸಿ ಅವರು ಮಾತನಾಡಿದರು.
ಈ ವರ್ಷದ ದ್ವಿತೀಯ ಪಿಯು ಪರೀಕ್ಷಾ ಪ್ರಕ್ರಿಯೆ ಇನ್ನೂ ಮುಕ್ತಾಯಗೊಂಡಿಲ್ಲ. ಇನ್ನೆರಡು ಪರೀಕ್ಷೆಗಳಿವೆ. ಆದ್ದರಿಂದ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಉದ್ದೇಶದಿಂದ, ನಿರೀಕ್ಷಿತ ಅಂಕ ಪಡೆಯದ ವಿದ್ಯಾರ್ಥಿಗಳು ತಮ್ಮ ಅಂಕವನ್ನು ಸುಧಾರಿಸಿಕೊಳ್ಳುವ ದೃಷ್ಟಿಯಿಂದ ಯಾವುದೇ ಆತಂಕ, ಬೇಸರಕ್ಕೆ ಒಳಗಾಗದೇ ಮುಂದಿನ ಪರೀಕ್ಷೆಯನ್ನು ಬರೆಯಿರಿ ಎಂದು ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪಿಯುಸಿ

ಇದನ್ನೂ ಓದಿ : ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಜೀವನಪರ್ಯಂತ ನಿಷೇಧ! ಪಿಯುಸಿ

ಶಿಕ್ಷಕರಿಗೆ ಮುಖ ಚಹರೆಯಲ್ಲಿ ಹಾಜರಿ ಪಿಯುಸಿ

ರಾಜ್ಯದಲ್ಲಿ ಕೊರತೆ ಇರುವ ಶಿಕ್ಷಕರ ಪ್ರಮಾಣವನ್ನು ಕಡಿಮೆ ಮಾಡಲು ಶೀಘ್ರದಲ್ಲೇ ನೇಮಕಾತಿ ನಡೆಸುತ್ತೇವೆ. ಅತಿಥಿ ಉಪನ್ಯಾಸಕರಿಂದ ಹೆಚ್ಚಿನ ಗುಣಮಟ್ಟ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇವೆ. ಫಲಿತಾಂಶ ಕುಸಿತಕ್ಕಾಗಿ ಹಿಂದಿನವರನ್ನು ನಾವು ದೂಷಿಸುವುದಿಲ್ಲ. ಬದಲಾಗಿ ನಾವು ಮುಂದಿನ ಪರೀಕ್ಷೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣದ ಸುಧಾರಣೆಗೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಉಳಿದಂತೆ ಶಾಲೆಗಳಲ್ಲಿ ಶಿಕ್ಷಕರು ಮುಖ ಚಹರೆ ಗುರುತಿನ ಮೂಲಕ ಹಾಜರಿ ಹಾಕುವ ವ್ಯವಸ್ಥೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

ಇದನ್ನೂ ನೋಡಿ : ಬಾಣಂತಿಯರ ಸಾವಿನ ಹೊಣೆ ಯಾರದ್ದು? ಮೆಡಿಸಿನ್ ಮಾಫಿಯಾಗೆ ಕಡಿವಾಣ ಯಾವಾಗ?! Janashakthi Media

Donate Janashakthi Media

Leave a Reply

Your email address will not be published. Required fields are marked *