ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರ ನೀಡುವ ಕುರಿತು ಪ್ರಾಣಿ ಕಲ್ಯಾಣ ಮಂಡಳಿ ಮಾರ್ಗಸೂಚಿಗಳ ಬಗ್ಗೆ ಜಾಗೃತಿ ಮೂಡಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಅವರನ್ನೊಳಗೊಂಡ ನ್ಯಾಯಪೀಠವು ಬೀದಿ ನಾಯಿಗಳನ್ನು ನಿಯಂತ್ರಿಸಲು ಮತ್ತು ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಜಾರಿಗೆ ತರಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ಇದನ್ನೂ ಓದಿ: ತೆಲಂಗಾಣ | ಆಡಳಿತರೂಢ ಬಿಆರ್‌ಎಸ್ ಶಾಸಕನ ನಿವಾಸದ ಮೇಲೆ ಐಟಿ ದಾಳಿ
“ಮಾರ್ಗಸೂಚಿಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳದ ಹೊರತು, ಮಾರ್ಗಸೂಚಿಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯವಿಲ್ಲ. ಈ ಉದ್ದೇಶವನ್ನು ಸಾಧಿಸಲು ರಾಜ್ಯ ಸರ್ಕಾರ ತನ್ನ ವೆಬ್‌ಸೈಟ್‌ಗಳಲ್ಲಿ ಖಂಡಿತವಾಗಿ ಇವುಗಳಿಗೆ ವ್ಯಾಪಕ ಪ್ರಚಾರವನ್ನು ನೀಡಬೇಕು”ಎಂದು ವಿಭಾಗೀಯ ಪೀಠ ಹೇಳಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಕರೆದಿದ್ದ ಮಧ್ಯಸ್ಥಗಾರರ ಚರ್ಚೆಯಲ್ಲಿ ನಾಯಿ ಕಡಿತದಿಂದ ಸಾವನ್ನಪ್ಪುವ ಜನರ ಕುಟುಂಬಗಳಿಗೆ ಐದು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ಪರಿಹಾರವಾಗಿ 5,000 ರೂ. ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವಿಚಾರಣೆಯ ವೇಳೆ ಸರ್ಕಾರ ಹೇಳಿದೆ.
ಕರಪತ್ರಗಳು, ಸಿನಿಮಾ ವೇಳೆ ಚಿತ್ರಮಂದಿರಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ತಮಟೆ ಘೋಷಣೆಗಳನ್ನು ಮಾಡುವ ಸಮಸ್ಯೆಗಳ ಬಗ್ಗೆ ಅರಿವು ನೀಡಿದರೆ ಸಹಾವಾಗಲಿದೆ ಎಂದು ಹೈಕೋರ್ಟ್ ಸೂಚಿಸಿದೆ. ಮಧ್ಯಸ್ಥಗಾರರೊಂದಿಗೆ ಮತ್ತೊಂದು ಸಭೆ ನಡೆಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಲಾಗಿದ್ದು, ಇನ್ನೊಂದು ಆರು ವಾರಗಳಲ್ಲಿ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.
ವಿಡಿಯೊ ನೋಡಿ: ಮಾನವೀಯತೆ ಜಾಗಕ್ಕೆ ಮತೀಯತೆ ಬಂದಿದೆ – ಬರಗೂರು ರಾಮಚಂದ್ರಪ್ಪ Janashakthi Media