ಬೆಂಗಳೂರು: ನಗರದ ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತರಾದವರನ್ನು ಶರ್ಮಿಳಾ (34) ಎಂದು ಗುರುತಿಸಲಾಗಿದೆ. ಬೆಂಕಿ
ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಅವರು ಬೆಂಗಳೂರಿನ ಸುಬ್ರಮಣ್ಯ ಲೇಔಟ್ನಲ್ಲಿ ವಾಸವಿದ್ದರು. ಮಂಗಳೂರಿನಿಂದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರು.
ಪೊಲೀಸ್ ಮೂಲಗಳ ಪ್ರಕಾರ, ಜನವರಿ 3 ರಂದು ದುರಂತ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3 ರಂದು ರಾತ್ರಿ 10.30 ರ ಸುಮಾರಿಗೆ ಶರ್ಮಿಳಾ ವಾಸವಿದ್ದ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಪ್ರಣಾಳಿಕೆ ಇಲ್ಲದೇ ಇರುವುದರಿಂದ ಡಿಎಸ್ಎಸ್ ರಾಜಕೀಯ ಶಕ್ತಿಯಾಗಿ ಬೆಳೆಯಲು ಸಾಧ್ಯವಾಗಿಲ್ಲ
ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು. ಮನೆಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಮನೆ ಪರಿಶೀಲನೆ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದಿರೋದು ಕಂಡುಬಂದಿದೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪರೀಕ್ಷೆ ನಡೆಸಿದ್ದ ವೈದ್ಯರು, ಆಕೆ ಮೃತ ಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಬೆಂಕಿ ಬಿದ್ದ ಪರಿಣಾಮ ರೂಮ್ನಿಂದ ಹೊರ ಬರಲಾಗದೇ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯಿಂದ ರೂಮಿನಲ್ಲಿ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ಸುಟ್ಟು ಹೋಗಿವೆ. ಸ್ಥಳಕ್ಕೆ ಸೋಕೋ ಟೀಮ್, ಎಫ್ಎಸ್ಎಲ್ ತಂಡ ಭೇಟಿ ಪರಿಶೀಲನೆ ಮಾಡಿದೆ. ನಿಖರ ಕಾರಣ ತಿಳಿಯಲು ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.
ಇದನ್ನೂ ನೋಡಿ: ಮರ್ಯಾದೆಗೇಡು ಹತ್ಯೆ ತಡೆಗೆ ಪ್ರತ್ಯೇಕ ಕಾಯ್ದೆಗೆ ಸಿದ್ಧತೆ!?| ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
