ಕೋಲಾರ: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲೇ ಸಂಸದರು ಹಾಗೂ ಶಾಸಕರ ನಡುವೆ ಗಲಾಟೆ ನಡೆದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಸಂಸದ ಮುನಿಸ್ವಾಮಿ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ನಿನ್ನ ಗಂಡ ಬದುಕಿದ್ದಾನೆ ತಾನೇ? : ಸಾರ್ವಜನಿಕ ಸ್ಥಳದಲ್ಲಿ ಮಹಿಳೆಗೆ ನಿಂದಿಸಿದ ಬಿಜೆಪಿ ಸಂಸದ ಮುನಿಸ್ವಾಮಿ
ಸೆ-25 ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾದರ್ಶಕ್ಕೆ ಚಾಲನೆ ದೊರೆತಿದ್ದು, ಆಯಾ ಜಿಲ್ಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್.ಮುನಿಸ್ವಾಮಿ ನಡುವೆ ಜಟಾಪಟಿ ನಡೆದಿದ್ದು,ಏಕವಚನದಲ್ಲಿ ಬೈದಾಡಿಕೊಂಡಿದ್ದಾರೆ.
ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಸಂಸದ ಬಂಗಾರಪೇಟೆ ಶಾಸಕ ನಡುವೆ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಬೋ.. ಮಗನೇ, ಅಪ್ಪನಿಗೆ ಹುಟ್ಟಿದ್ರೆ ಸಾಬೀತು ಮಾಡು ಎಂದು ನಾರಾಯಣಸ್ವಾಮಿ ಕೂಗಾಟ ನಡೆಸಿದ್ದಾರೆ.
ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಇಬ್ಬರು ನಾಯಕರನ್ನು ವೇದಿಕೆಯಿಂದ ಕೆಳಗೆ ಕರೆದುಕೊಂಡು ಬಂದು ಸಮಾಧಾನ ಮಾಡಿದರು. ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ಅಕ್ರಂ ಪಾಷಾ, ಎಸ್ಪಿ ನಾರಾಯಣ್ ಹಾಗೂ ಸ್ಥಳೀಯ ಶಾಸಕರು ಭಾಗಿಯಾಗಿದ್ದರು.
ಇದನ್ನೂ ಓದಿ:ʼಬೊಟ್ಟು ಯಾಕಿಟ್ಟಿಲ್ಲʼ ಎಂದಿದ್ದ ಸಂಸದ ಮುನಿಸ್ವಾಮಿ ವಿರುದ್ಧ ಸಿಡಿದೆದ್ದ ಪ್ರತಿಭಟನಾಕಾರರ ಬಂಧನ
ಇಬ್ಬರ ನಡುವೆ ವಾಕ್ಸಮರ:
ಭೂಗಳ್ಳರನ್ನು ಪಕ್ಕದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿದಿರಿ ಎಂದು ಸಂಸದ ಎಸ್.ಮುನಿಸ್ವಾಮಿ ನೇರವಾಗಿ ಬಂಗಾರಪೇಟೆಯ ಶಾಸಕರ ವಿರುದ್ಧ ವೇದಿಕೆ ಮೇಲೆಯೇ ಆರೋಪ ಮಾಡಿದರು. ಇದರಿಂದ ಕೆಂಡಾಮಂಡಲರಾದ ಶಾಸಕ ನಾರಾಯಣಸ್ವಾಮಿ, ಜನಪ್ರತಿನಿಧಿಗೆ ಮರ್ಯಾದೆ ಕೊಟ್ಟು ಮಾತನಾಡಿ ಎಂದು ತಿರುಗೇಟು ನೀಡಿದರು.