ಈ ಚುನಾವಣೆಯು ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ ನಡೆಸುವುದಾಗಿದೆ ; ಪ್ರಿಯಾಂಕಾ ಗಾಂಧಿ

ನವದೆಹಲಿ : ಲೋಕಸಭಾ ಚುನಾವಣೆಯ 3ನೇ ಹಂತದ  ಮತದಾನ ಇಂದು ದೇಶದಾದ್ಯಂತ ನಡೆಯುತ್ತಿದ್ದು, ಈ ಚುನಾವಣೆಯು ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ ನಡೆಸುವುದಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಪ್ರಿಯಾಂಕಾ 

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‍ಪೋಸ್ಟ್‌ ಹಂಚಿಕೊಂಡಿರುವ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಈ ಚುನಾವಣೆಯು ಸಂವಿಧಾನ ಮತ್ತು ಪ್ರಜಾ‍ಪ್ರಭುತ್ವ ರಕ್ಷಿಸುವ ಚುನಾವಣೆಯಾಗಿದೆ ಎಂದು ವಾದ್ರಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿ : ಐದು ರಾಷ್ಟ್ರಗಳ ಚುನಾವಣಾ ಆಯೋಗದ ಪ್ರತಿನಿಧಿಗಳ ನಿಯೋಗ ಭೇಟಿ; ಲೋಕಸಭಾ ಚುನಾವಣೆ: ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆ ವೀಕ್ಷಣೆ

‘ಪ್ರೀತಿಯ ದೇಶ‌ದ ಜನರೆ, ನಿಮ್ಮ ಪ್ರತಿಯೊಂದು ಮತವೂ ಅಮೂಲ್ಯವಾದ್ದದ್ದು. ವಿವೇಚನೆಯನ್ನು ಬಳಿಸಿ ಮತ ಚಲಾಯಿಸಿ, ನಿಮ್ಮ ಒಂದು ಮತವು ನಿಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ನಿರ್ಧರಿಸುತ್ತದೆ‘ ಎಂದು ಹೇಳಿದ್ದಾರೆ.

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 93 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. 120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8.39 ಕೋಟಿ ಮಹಿಳಾ ಮತದಾರರು ಸೇರಿದಂತೆ 17.24 ಕೋಟಿ ಮತದಾರರು ಮೂರನೇ ಹಂತದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.

ಇದನ್ನು ನೋಡಿ : ದ್ವೇಷದ ಜಾಹೀರಾತಿನ ಮೂಲಕ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಬಿಜೆಪಿಯವರ ಮೇಲೆ ಕ್ರಮಕ್ಕೆ ಆಗ್ರಹJanashakthi Media

Donate Janashakthi Media

Leave a Reply

Your email address will not be published. Required fields are marked *