ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಕುರಿತು ಶುಕ್ರವಾರ ತಡರಾತ್ರಿ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಗೂಂಡಾ ಕಾಯ್ದೆಯಡಿ ಪ್ರಕರಣವನ್ನು ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದೆ ಎಂದು ತಿಳಿಸಿದೆ.ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಕೆರೆಯ ಮಣ್ಣನ್ನು ನುಂಗಿದ “ಸರ್ಕಾರಿ ನೌಕರರ ಸಂಘದ ಅಧ್ಯಕ್ಷ”! 71 ಲಕ್ಷರೂ ವಂಚನೆ!!
ಪುನೀತ್ ಕೆರೆಹಳ್ಳಿ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಹಲಸೂರು ಗೇಟ್, ಬೇಗೂರು, ಡಿಜೆ ಹಳ್ಳಿ, ಕಗ್ಗಲಿಪುರ, ಚಾಮರಾಜಪೇಟೆ, ಮಳವಳ್ಳಿ ಮತ್ತು ಸಾತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆಮಾಡಲಾಗಿತ್ತು ಎಂದು ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.