ರಾಂಪುರ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಕರೆ ನೀಡಿದ್ದ ಉದಯನಿಧಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಆರೋಪದ ಮೇಲೆ ಪ್ರಿಯಾಂಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಒಂದು ವರ್ಗವನ್ನು ನೋಯಿಸುವ ಯಾವುದೇ ವಿಷಯದಲ್ಲಿ ನಾವು ಭಾಗಿಯಾಗಬಾರದು : ಮಮತಾ ಬ್ಯಾನರ್ಜಿ
ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆ ಕೆರಳಿಸುವ, ಉದ್ದೇಶಪೂರ್ವಕ, ದುರುದ್ದೇಶದ ಕೃತ್ಯಗಳು) ಮತ್ತು 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ) ಅಡಿಯಲ್ಲಿ ಇಲ್ಲಿನ ಸಿವಿಲ್ ಲೇನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲರಾದ ಹರ್ಷ ಗುಪ್ತ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಸೆಪ್ಟೆಂಬರ್ 6 ರಂದು ಎಫ್ಐಆರ್ ದಾಖಲಿಸಲಾಗಿದೆ. ತಮಿಳುನಾಡಿನಲ್ಲಿ ಕಳೆದ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಡೆಂಗಿ, ಮಲೇರಿಯಾಗೆ ಹೋಲಿಕೆ ಮಾಡಿದ್ದರು. ನಂತರ ಸನಾತನ ಧರ್ಮ ನಿರ್ಮೂಲನೆ ಆಗಬೇಕು ಎಂದಿದ್ದರು. ಈ ಹೇಳಿಕೆಯನ್ನು ಬೆಂಬಲಿಸಿ ಪ್ರಿಯಾಂಕ್ ಖರ್ಗೆ ಮಾತನಾಡಿದ್ದರು. ಪ್ರಿಯಾಂಕ್ ಖರ್ಗೆ