ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ರನ್ನು ನಿಂದಿಸಿದ ಆರೋಪದಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಕಳೆದ ವಾರದ ಎಪಿಸೋಡ್‌ನಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಕೂತು ರಕ್ಷಿತಾ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ರಕ್ಷಿತಾರನ್ನು ‘ಸ್ಲಮ್’ ಎಂದು ಅಶ್ವಿನಿ ಗೌಡ ಕರೆದಿದ್ದರು. ಇದೇ ವಿಚಾರವಾಗಿ ಇದೀಗ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದುವರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ
ದೂರಿನಲ್ಲಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ.
ಇದನ್ನೂ ನೋಡಿ: ಗುಜರಾತ್ | ವರ್ಚಸ್ಸಿನ ಭೀತಿ ಬಿಜೆಪಿ – ಸಚಿವ ಸಂಪುಟಕ್ಕೆ ಫುಲ್ ಸರ್ಜರಿ Janashakthi Media
