ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಕಿರುಕತೆಯನ್ನು ಆಧರಿಸಿ ತೆರೆಗೆ ಬಂದಿರುವ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರತಂಡದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸದರು.
ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸುವಂತೆ ಚಿತ್ರ ನಿರ್ದೇಶಕ ಶಶಾಂಕ್, ಚಿತ್ರಕಥಾ ಲೇಖಕ ಅನಂತ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ಸಿಎಂ ಭೇಟಿ ಮಾಡಿ ಮನವಿ ಮಾಡಿದರು.
ಟಿಕೆಟ್ ದರ ಕಡಿತಗೊಳಿಸಿದ ಚಿತ್ರತಂಡ
‘ಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾ ಬಿಡುಗಡೆಯಾಗಿ ಮೂರು ವಾರ ಕಳೆದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸದ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್ ದರ ಕಡಿತಗೊಳಿಸುವ ಬಗ್ಗೆ ಚಿತ್ರತಂಡ ನಿರ್ಧಾರ ಕೈಗೊಂಡಿತ್ತು.
ಟಿಕೆಟ್ ದರವನ್ನು ಕಡಿತಗೊಳಿಸಿರುವ ಬಗ್ಗೆ ಚಿತ್ರ ನಿರ್ದೇಶಕ ಶಶಾಂಕ್ ಸೋಗಾಲ್ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹೊಂಚಿಕೊಂಡಿದ್ದರು. ‘ಮೇ 6ರಿಂದ ಚಿತ್ರಮಂದಿರಗಳಲ್ಲಿ ಸಿನಿಮಾದ ಸಾಮಾನ್ಯ ಟಿಕಿಟ್ ದರ 50 ರೂ. ಮತ್ತು ಬಾಲ್ಕನಿ ಟಿಕೆಟ್ ದರ 70 ರೂ. ಆಗಿರಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರ 99 ರೂ.ಗೆ ತಗ್ಗಿಸಲಾಗಿದೆ. ಎಲ್ಲರಿಗೂ ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್ ನೀಡಲಾಗುತ್ತಿದೆʼ ಎಂದಿದ್ದರು.