ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ : ಸಚಿವ ನಾಗೇಂದ್ರ ರಾಜೀನಾಮೆ?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸಚಿವ ನಾಗೇಂದ್ರ ತಲೆದಂಡವಾಗಿದ್ದು, ಸಚಿವಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಎಸ್‌ಟಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಬಹುಕೋಟಿ ಹಗರಣ ಬಯಲಿಗೆ ಬಂದಿದ್ದು, ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದು, ಈ ವಿಚಾರವನ್ನು ರಾಜಕೀಯಕ್ಕೆ ಪ್ರಬಲ ಅಸ್ತ್ರವನ್ನಾಗಿ ಬಿಜೆಪಿ ಬಳಸಿಕೊಂಡಿತ್ತು. ಕೊನೆಗೂ

ಇದನ್ನೂ ಓದಿ: ಶ್ರೀರಾಮುಲು ಸೋಲಿಗೆ ಕಾರಣರಾದವರ್ಯಾರು ಗೊತ್ತಾ  ?

ಬಿಜೆಪಿಯ ರಾಜ್ಯಾ‍ಧ್ಯಕ್ಷ, ವಿಪಕ್ಷ ನಾಯಕ ಸೇರಿದಂತೆ ಪಕ್ಷದ ಇತರೆ ಮುಖಂಡರಾದಿಯಾಗಿ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದವು. ಅಲ್ಲದೇ ರಾಜಭವನ ಚಲೋ ನಡೆಸಿ ರಾಜ್ಯಪಾಲರಿಗೆ ಮನವಿಯನ್ನು ನೀಡಿತ್ತು.

ತೀವ್ರ ಒತ್ತಡ ಮತ್ತು ಸರ್ಕಾರಕ್ಕೆ ಮುಜುಗರಕ್ಕೀಡಾದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡುವಂತೆ ಖಡಕ್‌ ಸೂಚಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ನಾಗೇಂದ್ರರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಕಾವೇರಿ ನಿವಾಸಕ್ಕೆ ಕರೆದುಕೊಂಡು ಇಬ್ಬರು‌ ನಾಯಕರು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು.ಅದರಂತೆ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಆರಂಭದಲ್ಲಿ ಆತ್ಮಹತ್ಯೆಯಲ್ಲಿ ಅಧಿಕಾರಿ ಮಾಡಿದ್ದ ಆರೋಪವನ್ನು ತಳ್ಳಿಹಾಕಿದ್ದ ನಾಗೇಂದ್ರ ಸ್ಪಷ್ಟೀಕರಣವನ್ನೂ ನೀಡಿದ್ದರು. ಈ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದೀಗ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿನ ಒಂದು ಸಚಿವಸ್ಥಾನದ ವಿಕೇಟ್‌ ಪತನಗೊಂಡಂತಾಗಿದ್ದು, ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ಸಲ್ಲಿಸುವ ಮೊದಲ ಸಚಿವ ಎಂಬ ಅಪಖ್ಯಾತಿಗೆ ನಾಗೇಂದ್ರ ಒಳಗಾದಂತಿದೆ.

ಇದನ್ನೂ ನೋಡಿ: ಲೋಕಮತ 2024 | ಐದು ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ | ನಾಯ್ಡು, ನಿತೀಶ್‌ ಕಿಂಗ್‌ಮೇಕರ್‌ Janashakthi Media

Donate Janashakthi Media

Leave a Reply

Your email address will not be published. Required fields are marked *