ದಲಿತರಿಗೆ ಅಪಮಾನ: ಆಂದೋಲಾ ಶ್ರೀ ವಿರುದ್ಧ ‘FIR’ ದಾಖಲು

ಲಬುರ್ಗಿ: ಸಚಿನ್ ಪಾಂಚಾಳ ಆತ್ಮಹತ್ಯೆ ಕುರಿತು ಸುದ್ಧಿಗೋಷ್ಠಿ ನಡೆಸಿದ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಆಂದೋಲಾ ಶ್ರೀ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರಿಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಇದೀಗ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ‘FIR’ ದಾಖಲಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರಿಗೆ ಅಪಮಾನವಾಗುವ ರೀತಿಯಲ್ಲಿ ಆಂದೋಲಾ ಶ್ರೀ ಮಾತನಾಡಿದ್ದಾರೆ ಎಂದು ಆರೋಪಿಸಿ ಕಲಬುರಗಿಯ ಬಸವ ನಗರದ ನಿವಾಸಿ, ಹೋರಾಟಗಾರ ಅಮಲಪ್ಪ ಭೀಮಪ್ಪ ಹೊಸಮನಿ ಎಂಬುವವರು ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ| 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ಸ್ವಾಮೀಜಿ ವಿರುದ್ಧ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಅಮಲಪ್ಪ ಭೀಮಪ್ಪ ಹೊಸಮನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಸ್ವಾಮೀಜಿ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ನೋಡಿ: ವಿವೇಕಾನಂದ ಸಮಾಜಮುಖಿ ಚಿಂತಕ – ಟಿ. ಸುರೇಂದ್ರರಾವ್‌ Janashakthi Media

Donate Janashakthi Media

Leave a Reply

Your email address will not be published. Required fields are marked *