ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಬೆಂಗಳೂರು : ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ರೇಸ್ ಕೋರ್ಸ್‌ ರಸ್ತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು  ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು. ಈ ವಿಚಾರವಾಗಿ ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ವಶಪಡಿಸಿಕೊಂಡಿರುವ 76.11 ಕೋಟಿ ಹಣವನ್ನು ನಿಗಮಕ್ಕೆ ಬಿಡುಗಡೆ ಮಾಡಲು ವಿಶೇಷ ನ್ಯಾಯಾಲಯ ಆದೇಶ

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಬೆಂಗಳೂರಿನ ಹೈ ಗೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದೆ.

ಪಿಎಸ್‌ಐ ಶಶಿಧರ್ ವಣ್ಣೂ‌ ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಿ ಎಸ್ ಐ ಶಶಿಧರ ಅವರು ದೂರು
ನೀಡಿದ್ದರು. ಹಾಗಾಗಿ ಅವರ ದೂರನ್ನು ಆಧರಿಸಿ FIR ದಾಖಲಾಗಿದೆ. ನಿನ್ನೆ ಬೆಳಿಗ್ಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು.

ಇದನ್ನೂ ನೋಡಿ : ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಆಕ್ಷೇಪಾರ್ಹ ಪದಬಳಸಿದ ಸಿಟಿ ರವಿ Janashakthi Media

Donate Janashakthi Media

Leave a Reply

Your email address will not be published. Required fields are marked *