ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೋಮು
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ | ಚಲಾವಣೆಯಾದ ಮತ್ತು ಎಣಿಕೆ ಮಾಡಿದ ಮತಗಳ ನಡುವೆ ಭಾರೀ ಅಂತರ
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶಕುಂತಲಾ, ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಎಂದು ದೂರಲಾಗಿದೆ.
ಇದನ್ನೂ ನೋಡಿ: ನವೆಂಬರ್ 26 ಭಾರತದ ಸಂವಿಧಾನ ದಿನ | ಈ ದಿನದ ಮಹತ್ವ, ಇತಿಹಾಸದ ಬಗ್ಗೆ ತಿಳಿಯಿರಿ Janashakthi Media