ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದಡಿ, ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅರುಣ್ ಸೋಮಣ್ಣ, ಜೀವನ್ ಕುಮಾರ್ ಮತ್ತು ಪ್ರಮೋದ್ ರಾವ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಸಂಜಯ ನಗರದ ಎಇಸಿಎಸ್ ನಿವಾಸಿ ತೃಪ್ತಿ ಹೆಗಡೆ ಎಂಬುವರು ಇವರ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ. ದೂರುದಾರರಾದ ತೃಪ್ತಿ ಹಾಗೂ ಮಧ್ವರಾಜ್ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರು.
ಇದನ್ನು ಓದಿ : ಪೋಕ್ಸೋ ಪ್ರಕರಣ : ಮಾಜಿ ಸಿಎಂ ಬಂಧನಕ್ಕೆ ಸಿದ್ಧತೆ! ಯಡಿಯೂರಪ್ಪ ನಾಪತ್ತೆ?
2013ರಲ್ಲಿ ಸರಕಾರಿ ಕಾರ್ಯಕ್ರಮವೊಂದರಲ್ಲಿ ಮಧ್ವರಾಜ್ ಗೆ ಆರುಣ್ ಸೋಮಣ್ಣ ಪರಿಚಯವಾಗಿತ್ತು.2017ರಲ್ಲಿ ಅರುಣ್ ಸೋಮಣ್ಣ ಪುತ್ರಿಯ ಹುಟ್ಟುಹಬ್ಬ ಕಾರ್ಯಕ್ರಮವನ್ನೂ ಮಧ್ವರಾಜ್ ಒಡೆತನದ ಕಂಪನಿ ಆಯೋಜಿಸಿತ್ತು.ಇದರಿಂದ ಆರುಣ್ ಸೋಮಣ್ಣ ಮಧ್ವರಾಜ್ ಜತೆ ಉತ್ತಮ ಬಾಂಧವ್ಯ ಏರ್ಪಟ್ಟಿತ್ತು. ಅರುಣ್, ಮಧ್ವರಾಜ್ ಜಂಟಿಯಾಗಿ ನೈಬರ್ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟನರ್ ಶಿಪ್ ಡೀಡ್ ಮೇಲೆ ಆರಂಭಿಸಿದ್ದರು.
ಅರುಣ್ ಸೋಮಣ್ಣ ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದರು. ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್‌ಗೆ ಕಂಪನಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ಬೆದರಿಸಿ,ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪ ಇದಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತ ಸಂಜಯ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಆಡಳಿತ ನಡೆಸುವವರಿಗೆ ಸಂವಿಧಾನ ಶಿಕ್ಷಣದ ಅಗತ್ಯವಿದೆ’ – ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್Janashakthi Media