ಕುಳೂರು ಅಪಘಾತ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಎಫ್‌ಐಆರ್

ಮಂಗಳೂರು: ಕುಳೂರಿನಲ್ಲಿ ನಡೆದ ಅಪಘಾತಕ್ಕೆ ಸಂಬಂಧ, ಲಾರಿ ಚಾಲಕ ಮತ್ತು ಗುಂಡಿ ಮುಚ್ಚದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಾಗಿದೆ. ಕುಳೂರು

ಶ್ರೀಮತಿ ಮಾಧವಿ (44 ವರ್ಷ) ರವರು ತಮ್ಮ ಸ್ಕೂಟರಿನಲ್ಲಿ ಕುಳಾಯಿ ಕಡೆಯಿಂದ ಕುಂಟಿಕಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದ ಅವಧಿಯಲ್ಲಿ ಬೆಳಿಗ್ಗೆ ಸುಮಾರು 8-30 ಗಂಟೆಗೆ ಕೂಳೂರಿನ ರಾಯಲ್ ಓಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯ ಪರಿಣಾಮ ಸ್ಕೂಟರ್ ಸಮೇತ ಬಿದ್ದ ಸಮಯ ಅವರ ಹಿಂಬದಿಯಿಂದ ಅಂದರೆ ಉಡುಪಿ ಕಡೆಯಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಅದರ ಚಾಲಕ ಮೊಹಮ್ಮದ್ ಫಾರೂಕ್ ಎಂಬವರು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ಬಿದ್ದಿದ್ದ ಮಾಧವಿಯವರ ಮೇಲೆ ಲಾರಿಯ ಚಕ್ರವು ಹರಿದು ಗಂಭೀರ ಸ್ವರೂಪದ ಗಾಯಗೊಂಡು ಮೃತಪಟ್ಟಿರುತ್ತಾರೆ. ಕುಳೂರು

ಇದನ್ನೂ ಓದಿ: ಒಳ ಮೀಸಲಾತಿ: ಬಲಗೈಗೆ ಆದ ಅನ್ಯಾಯ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ

ಈ ಅಪಘಾತಕ್ಕೆ ಹೆದ್ದಾರಿಯ ನಿರ್ವಾಹಣೆಯನ್ನು ಸರಿಯಾಗಿ ನಿರ್ವಹಿಸದೇ, ರಸ್ತೆಯಲ್ಲಿ ಆಗಿರುವ ರಸ್ತೆಗುಂಡಿಗಳನ್ನು ಮುಚ್ಚದೇ ನಿರ್ಲಕ್ಷ್ಯತನದಿಂದ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯವರ ಮೇಲೆ ಹಾಗೂ ನಿರ್ಲಕ್ಷ್ಯತನದ ಚಾಲನೆ ಮಾಡಿರುವ ಲಾರಿ ಚಾಲಕನ ಮೇಲೆ ಮಂ. ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 224/2025 ಕಲಂ 281, 106(1) ಬಿ.ಎನ್.ಎಸ್ ಮತ್ತು 198(ಎ) ಐಎಂವಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ಪರಿಷ್ಕೃತ ಜಿಎಸ್ ಟಿ : ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ? Janashakthi Media

Donate Janashakthi Media

Leave a Reply

Your email address will not be published. Required fields are marked *