ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದವನ ವಿರುದ್ಧ ಎಫ್‌ಐಆರ್

ಬೆಂಗಳೂರು: ವಿಧಾನಪರಿಷತ್‌ನ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಸಹೋದರ,  ಡಾ. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ  ಯುವಕನ ವಿರುದ್ಧ ಎಪ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ಆರೋಪಗೈದಿರುವ‌ ಸೂರಜ್ ಬ್ರಿಗೇಡ್‌ನ ಖಜಾಂಜಿ ಶಿವಕುಮಾರ್ ಹೆಚ್‌.ಎಲ್‌ ವಿರುದ್ಧ ಹಾಸನ ಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.‌

ಶಿವಕುಮಾರ್ ತನಗೆ  5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ನೀಡದಿದ್ದರೆ ಸೂರಜ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

“ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಆತ ನನಗೆ ಪರಿಚಯವಾಗಿದ್ದ. ನಾನು ಸೂರಜ್ ಬ್ರಿಗೇಡ್ ಖಜಾಂಚಿ ಆಗಿರುವುದರಿಂದ ಸೂರಜ್ ಅವರನ್ನು ಭೇಟಿ ಮಾಡಿಸುವಂತೆ ಕೇಳಿದ್ದ. ಅದರಂತೆ ಜೂನ್ 16ರಂದು ಅವರು ಚನ್ನರಾಯಪಟ್ಟಣ ತಾಲೂಕಿನ ಗನ್ನಕಡದ ತೋಟದ ಮನೆಯಲ್ಲಿ ಸಿಗುತ್ತಾರೆ ಎಂದು ತಿಳಿಸಿದ್ದೆ” ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ನೋಡಿ: ವಚನ ವಾಣಿ – 01 ಅರ್ಚನೆ ಪೂಜನೆ ನೇಮವಲ್ಲ, ಮಂತ್ರ ತಂತ್ರ ನೇಮವಲ್ಲ – ಡಾ. ಮೀನಾಕ್ಷಿ ಬಾಳಿ Janashakthi Media

Donate Janashakthi Media

Leave a Reply

Your email address will not be published. Required fields are marked *