ಬಿಜೆಪಿಯ ಲೋಕೇಶ್‌ ಅಂಬೇಕಲ್‌, ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಳೆದ ಶನಿವಾರ ಮಧ್ಯಾಹ್ನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ ಹಣ ಸಾಗಿಸುತ್ತಿದ್ದ 2 ಕೋಟಿ‌ ಹಣ ಪತ್ತೆ ಹಿನ್ನೆಲೆ ಚುನಾವಣಾಧಿಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೋಕೇಶ್ ಅಂಬೆಕಲ್, ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ‌.

ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ‌ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ.

ಇದನ್ನೂ ಓದಿ: ಹೆಚ್​. ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್

ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ. ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು – ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು.

ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ. ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನ ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

ಇದನ್ನೂ ನೋಡಿ: ಸುಳ್ಳಿನಾ ಸರದಾರಾ ಮೋದಿಯ ಸರಕಾರ Janashakthi Media

Donate Janashakthi Media

Leave a Reply

Your email address will not be published. Required fields are marked *