‌‘ಮಂಗಳೂರು ಮುಸ್ಲಿಂ’ ಫೇಸ್‌ಬುಕ್‌ ಪೇಜ್‌ ವಿರುದ್ಧ ಪ್ರಕರಣ

ಮಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ನಂತರ ಮಂಗಳೂರಿನಲ್ಲಿ ಪ್ರಚೋದನಕಾರಿ ಫೇಸ್ಬುಕ್ ಪೋಸ್ಟ್ ಹಾಕಲಾಗಿದೆ.

ಮಂಗಳೂರು ಮುಸ್ಲಿಂ ಫೇಸ್ಬುಕ್ ಪೇಜ್ ನಿಂದ ಪೋಸ್ಟ್ ಮಾಡಲಾಗಿದೆ. 2015 ರಲ್ಲಿ ಪ್ರವಾದಿಗೆ ನಿಂದನೆ ಮಾಡಿದ್ದರಿಂದ ಕೊಲೆಯಾಗಿದೆ. ಪ್ರವಾದಿ ನಿಂದಿಸಿದರೆ ಎಲ್ಲರಿಗೂ ಇದೇ ಸ್ಥಿತಿ ಎಂದು ಪೋಸ್ಟ್ ಹಾಕಲಾಗಿದೆ.

ಪ್ರಚೋದನಕಾರಿ ಫೇಸ್ಬುಕ್ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಂಗಳೂರು ಮುಸ್ಲಿಂ ಫೇಸ್ಬುಕ್ ಪೇಜ್ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣ ವಿಭಾಗದ ಹೆಚ್.ಸಿ. ದೂರು ನೀಡಿದ್ದು, ಪೊಲೀಸ್ ಕಾನ್ಸ್ಟೇಬಲ್ ದೂರು ಆಧರಿಸಿ ಸುಮೋಟೋ ಕೇಸ್ ದಾಖಲಿಸಲಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾರ್ಗದರ್ಶನದಲ್ಲಿ ಪೊಲೀಸರು ಕ್ರಮಕೈಗೊಂಡಿದ್ದಾರೆನ್ನಲಾಗಿದೆ.

ಇದನ್ನೂ ಓದಿ : ನಿಷೇಧಾಜ್ಞೆ ನಡುವೆಯೂ ಭುಗಿಲೆದ್ದ ಹಿಂಸಾಚಾರ

ಆಕ್ಷೇಪಾರ್ಹ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಮಂಗಳೂರು ಮುಸ್ಲಿಮ್ಸ್ ಪೇಜ್ ಮೇಲೆ ಮಂಗಳೂರು ಪೊಲೀಸರು ಸೆನ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಈ ಪೋಸ್ಟ್ ಅನ್ನು ಲೈಕ್, ಶೇರ್ ಹಾಗೂ ಕಮೆಂಟ್ಸ್ ಗಳನ್ನು ಮಾಡಿದವರೂ ಅಪರಾಧಿಗಳಾಗಿದ್ದು, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.

ಜೊತೆಗೆ 100ಕ್ಕೂ ಅಧಿಕ ಸಂಘಟನೆಗಳು, 1,064 ವ್ಯಕ್ತಿಗಳ ಸಾಮಾಜಿಕ ಜಾಲತಾಣಗಳನ್ನು ಮಂಗಳೂರು ಪೊಲೀಸ್ ತಂಡ ಗಮನಿಸುತ್ತಿದೆ. ಎರಡು ತಿಂಗಳಿನಿಂದ ಕೆಲವೊಂದು ಸಾಮಾಜಿಕ ಜಾಲತಾಣಗಳ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ಅಲ್ಲದೇ ಕೋಮು ಭಾವನೆ ಪ್ರಸಾರ ಮಾಡುವ, ಜಾತಿ ಧರ್ಮಗಳ ಹೆಸರಿನಲ್ಲಿ ಕೋಮು ಪ್ರಚಾರ ಮಾಡುವ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷದ ನಾಯಕರ ಪೋಸ್ಟ್​​​​ಗಳ ಮೇಲೆಯೂ ಗಮನ ಹರಿಸಲಾಗಿದೆ. ಆದ್ದರಿಂದ ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದರು.

 

Donate Janashakthi Media

Leave a Reply

Your email address will not be published. Required fields are marked *