ಚಿಕ್ಕೋಡಿ: ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ್ ಎಂಬವರ ಮೇಲೆ ಹಲ್ಲೆ ಆರೋಪ ಸಂಬಂಧಿಸಿದಂತೆ ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆಸ್ಪತ್ರೆಯಿಂದಲೇ ಅಥಣಿ ಪೊಲೀಸರಿಗೆ ದೂರು ನೀಡಿದ್ದಾರೆ ಹಲ್ಲೆಗೊಳಗಾದ ನಿಂಗರಾಜ ಕರೆಣ್ಣವರ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿದ್ದು, ಹೀಗಾಗಿ ಶಾಸಕ ಸವದಿ, ಪುತ್ರ ಚಿದಾನಂದ ಸೇರಿದಂತೆ ಒಟ್ಟು 8 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ವೆನೆಜುವೆಲಾ ಅಧ್ಯಕ್ಷರ ಅಪಹರಣ-ಸಿಪಿಐ(ಎಂ) ಪ್ರತಿಭಟನೆ
ಲಕ್ಷ್ಮಣ ಸವದಿ ಅವರೇ ಕಪಾಳಕ್ಕೆ ಹೊಡೆದರು. ಪುತ್ರ ಚಿದಾನಂದ ಸವದಿ ಬಲವಾಗಿ ಸೊಂಟಕ್ಕೆ ಒದ್ದರು. “ನನ್ನನ್ನು ಲಕ್ಷ್ಮಣ್ ಸವದಿ ಅವರು ಮನೆಗೆ ಕರೆಯಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದರು. ಬಳಿಕ ಕುಸಿದು ನೆಲಕ್ಕೆ ಬಿದ್ದ ನನ್ನ ಮೇಲೆ 7ರಿಂದ 8 ಜನರು ಹಲ್ಲೆ ನಡೆಸಿದರು” ಎಂದು ನಿಂಗರಾಜ ಕರೆಣ್ಣವರ ಆರೋಪಿಸಿದ್ದಾರೆ.
ಅಕ್ರಮ ತಂಡ ಸೇರಿ ಹಲ್ಲೆ, ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕುರಿತಂತೆ ಬಿಎನ್ಎಸ್ ಕಾಯ್ದೆಯ 189(2), 191(2), 115(2), 351(2), 352 (2), 190 ಕಲಂ ಅಡಿ ಪ್ರಕರಣ ದಾಖಲಿಸಲಾಗಿದೆ.
ಲಕ್ಷ್ಮಣ್ ಸವದಿ ಅವರ ವಿರುದ್ಧದ ದೊಡ್ಡ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸವದಿ ಅಭಿಮಾನಿಗಳು ಇಂದು ಅಥಣಿ ಪಟ್ಟಣ ಬಂದ್ ಕರೆ ನೀಡಿದ್ದಾರೆ.
ಇದನ್ನೂ ನೋಡಿ : ಬಿಗ್ ಡಿಬೇಟ್ : ಕೋಗಿಲು ಪ್ರಕರಣ | ವಾಸವಿದ್ದವರು ಯಾರು? ಹೊರ ರಾಜ್ಯದವರೇ? ಹೊರ ದೇಶದವರೇ?Janashakthi Media
