ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಟಾಪಟಿ| ಎಸ್‌.ಮುನಿಸ್ವಾಮಿ, ಎಸ್‌.ಎನ್ ನಾರಾಯಣಸ್ವಾಮಿ ವಿರುದ್ಧ FIR

ಬೆಂಗಳೂರು: ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ  ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್  ದಾಖಲಿಸಲಾಗಿದೆ.

ಇದನ್ನೂ ಓದಿ:Kolar| ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್ಎನ್ ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆದಿತ್ತು ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ನೀಡಿದ್ದು, ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸೆ.25ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ಅವರು ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ಇದನ್ನೂ ಓದಿ:ಮನುವ್ಯಾಧಿಗ್ರಸ್ಥ ಸಂಸದ ಮುನಿಸ್ವಾಮಿ ವಿರುದ್ಧ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

ಈ ವೇಳೆ ಎಸ್ಪಿ ನಾರಾಯಣ ಅವರು ಇಬ್ಬರ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಅಲ್ಲದೇ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಮಧ್ಯ ಪ್ರವೇಶಿಸಿ ಸಂಸದರಿಂದ ಅಗಬಹುದಾದಂತಹ ಮಾರಣಾಂತಿಕ ಹಲ್ಲೆಯನ್ನು ತಪ್ಪಿಸಿದ್ದಾರೆ.

ಜನತಾ ದರ್ಶನದಲ್ಲಿ ಮುನಿಸ್ವಾಮಿ ನನ್ನತ್ತ ಕೈ ತೋರಿಸಿ ಸಚಿವರನ್ನು ನೋಡುತ್ತಾ, ‘ಅಕ್ಕಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ನೀನೇನು ಮಾಡಲು ಸಾಧ್ಯ’ ಎಂದು ವ್ಯಂಗ್ಯವಾಗಿ ಮತ್ತು ದರ್ಪದಿಂದ ಅವಮಾನ ಮಾಡುವ ರೀತಿ ಮಾತನಾಡಿದ್ದಾರೆ’ ಎಂದು ದೂರಿನಲ್ಲಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ವಿಡಿಯೋ ನೋಡಿ:ʻʻಬೊಟ್ಟು ಯಾಕಿಟ್ಟಿಲ್ಲʼʼ ಗಟ್ಟಿತನ ಪ್ರದರ್ಶಿಸಿದ ದಿಟ್ಟ ಕವಿತೆಗಳು Janashakthi Media

Donate Janashakthi Media

Leave a Reply

Your email address will not be published. Required fields are marked *